Advertisement

ಸೈರಸ್ ಮಿಸ್ತ್ರಿ ಅಕಾಲಿಕ ನಿಧನ; ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸಂತಾಪ

06:28 PM Sep 04, 2022 | Team Udayavani |

ನವದೆಹಲಿ/ ಬೆಂಗಳೂರು: ಪಾಲ್ಘರ್‌ನ ಚರೋತಿಯಲ್ಲಿ ಭಾನುವಾರ ನಡೆದ ಅಪಘಾತದಲ್ಲಿ ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

”ಸೈರಸ್ ಮಿಸ್ತ್ರಿಯವರ ಅಕಾಲಿಕ ನಿಧನ ಆಘಾತಕಾರಿಯಾಗಿದೆ. ಅವರು ಭಾರತದ ಆರ್ಥಿಕ ಪರಾಕ್ರಮದಲ್ಲಿ ನಂಬಿಕೆಯಿಡುವ ಭರವಸೆಯ ವ್ಯಾಪಾರ ನಾಯಕರಾಗಿದ್ದರು. ಅವರ ನಿಧನದಿಂದ ವಾಣಿಜ್ಯ ಮತ್ತು ಉದ್ಯಮ ಲೋಕಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ. ಅವರ ಆತ್ಮಕೆ ಶಾಂತಿ ಸಿಗಲಿ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

”ದುರದೃಷ್ಟಕರ ರಸ್ತೆ ಅಪಘಾತದಲ್ಲಿ ಸೈರಸ್ ಮಿಸ್ತ್ರಿಯವರ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಪ್ರತಿಷ್ಠಿತ ಉದ್ಯಮಿ, ಆರ್ಥಿಕತೆಯ ಬೆಳವಣಿಗೆಯಲ್ಲಿ ಅವರ ಕೊಡುಗೆ ಅಪಾರವಾಗಿದೆ. ದೇವರು ಅವರ ಕುಟುಂಬ ಮತ್ತು ಸ್ನೇಹಿತರಿಗೆ ಈ ದೊಡ್ಡ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ”ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ಗುಜರಾತ್ ನಿಂದ ಮುಂಬಯಿಗೆ ಮರಳುತ್ತಿದ್ದ ಕಾರು ನದಿಯ ಸೇತುವೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಮಿಸ್ತ್ರಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next