Advertisement
ಸರ್ವಧರ್ಮ ಸಮ್ಮೇಳನಡಿ. 5ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ಗುಜರಾತ್‌ನ ಸೂರ್ಯಪೀಠದ ಶ್ರೀ ಜಗದ್ಗುರು ಸೂರ್ಯಾಚಾರ್ಯ ಶ್ರೀ ಕೃಷ್ಣದೇವನಂದಗಿರಿ ಮಹಾರಾಜ್ ಉದ್ಘಾಟಿಸುವರು. ಶಿಕ್ಷಣ ತಜ್ಞ ಎಂ. ಮಮ್ತಾಜ್ ಅಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಜೆ.ಆರ್. ಲೋಬೊ, ಕನ್ನಡ ಕಬೀರ ಪದ್ಮಶ್ರೀ ಇಬ್ರಾಹಿಮ್ ಸುತಾರ, ಚಿತ್ರನಟ ಶ್ರೀಧರ್ ಅವರು ಉಪನ್ಯಾಸಕಾರರಾಗಿ ಭಾಗವಹಿಸಲಿದ್ದಾರೆ. ಬಳಿಕ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಲಿದೆ.
ಡಿ. 6ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ವಿಆರ್‌ಎಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ವಿಜಯ ಸಂಕೇಶ್ವರ ಉದ್ಘಾಟಿಸಿ ಸುವರ್ಣ ಸಂಚಯ ಪುಸ್ತಕ ಬಿಡುಗಡೆಗೊಳಿಸುವರು. ವಿಮರ್ಶಕ ಪ್ರೊ| ಟಿ.ಪಿ. ಅಶೋಕ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಬಿ.ಆರ್. ರವಿಕಾಂತೇಗೌಡ, ಚಲನಚಿತ್ರ ನಿರ್ದೇಶಕ ಎಂ. ಅಬ್ದುಲ್ ರೆಹಮಾನ್ ಪಾಷ, ಅಂಕಣಕಾರ್ತಿ ಕವಿತಾ ಅಡೂರು ಅವರು ಉಪನ್ಯಾಸ ನೀಡಲಿದ್ದಾರೆ. ಬಳಿಕ ಸುಗಮ ಸಂಗೀತ ಜರಗಲಿದೆ.
ಡಿ. 2ರಿಂದ 6ರ ವರೆಗೆ ವಸ್ತು ಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ 5.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಡಿ. 4ರಂದು ಸಂಜೆ 3ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಾಕಲಾ ಗೋಷ್ಠಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಡಿ. 7ರಂದು ಸಂಜೆ 6.30ಕ್ಕೆ ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ, ಯಕ್ಷ-ಜಿನ-ಗಾನ-ವೈಭವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.