Advertisement

ಡಿ. 29-31: ಮಲ್ಪೆ ಬೀಚ್‌ ಉತ್ಸವ

01:17 AM Dec 28, 2019 | mahesh |

ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿ, ನಿರ್ಮಿತಿ ಕೇಂದ್ರ, ಪಶುಪಾಲನ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಹಾಗೂ ಸ್ಥಳೀಯ ಭಜನ ಮಂಡಳಿಗಳ ಸಹಯೋಗದೊಂದಿಗೆ ಡಿ. 29ರಿಂದ 31ರ ವರೆಗೆ “ಮಲ್ಪೆ ಬೀಚ್‌ ಉತ್ಸವ-2019′ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಡಿ. 29ರಂದು ಬೆಳಗ್ಗೆ 9ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಗೃಹಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆ ವಹಿಸುವರು. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ. ರವಿ, ಸಂಸದರಾದ ಶೋಭಾ ಕರಂದ್ಲಾಜೆ, ಬಿ.ವೈ. ರಾಘವೇಂದ್ರ, ಶಾಸಕರಾದ ವಿ. ಸುನಿಲ್‌ ಕುಮಾರ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್‌. ಮೆಂಡನ್‌, ಬಿ.ಎಂ. ಸುಕುಮಾರ ಶೆಟ್ಟಿ, ಆಯನೂರು ಮಂಜುನಾಥ, ಎಸ್‌.ಎಲ್‌. ಭೋಜೇಗೌಡ, ಡಾ| ತೇಜಸ್ವಿನಿ ಗೌಡ, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್‌ ಪೂಜಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್‌, ಜಿಲ್ಲಾಧಿಕಾರಿ ಜಿ. ಜಗದೀಶ್‌, ಜಿ.ಪಂ. ಸಿಇಒ ಪ್ರೀತಿ ಗೆಹಲೋಟ್, ಎಸ್‌ಪಿ ನಿಶಾ ಜೇಮ್ಸ್‌, ಕರಾವಳಿ ಕಾವಲು ಪೊಲೀಸ್‌ ಅಧೀಕ್ಷಕ ಚೇತನ್‌ ಆರ್‌., ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ, ದ.ಕ., ಉಡುಪಿ ಜಿಲ್ಲಾ ಮೀನುಗಾರಿಕ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಮಲ್ಪೆ ಬೀಚ್‌ ಉತ್ಸವದ ಸಂಯೋಜಕ ಪಾಂಡುರಂಗ ಮಲ್ಪೆ ಭಾಗವಹಿಸಲಿದ್ದಾರೆ.

ಅನಂತರ ಪುರುಷರಿಗೆ ವಾಲಿಬಾಲ್‌, ಮಹಿಳೆಯರಿಗಾಗಿ ತ್ರೋಬಾಲ್‌, ಚಿತ್ರಕಲೆ, ಮರಳು ಶಿಲ್ಪ, ಗಾಳಿಪಟ ಪ್ರದರ್ಶನ, ಶ್ವಾನ ಪ್ರದರ್ಶನ ಸ್ಪರ್ಧೆಗಳು ನಡೆಯಲಿವೆ. ಅನಂತರ ಅಂಜಲಿ ವಿಲ್ಸನ್‌ ಡ್ಯಾನ್ಸ್‌ ಟ್ರೂಪ್‌, ಶಿರಸಿ ಮತ್ತು ಜಿಲ್ಲೆಯ ಹೆಸರಾಂತ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎಂದರು.

ನಗರಸಭೆಯ ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್‌ ನಾಯಕ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಶೆಟ್ಟಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರೊ ಕಬಡ್ಡಿ, ಸಂಗೀತ ರಸಸಂಜೆ
ಡಿ. 30ರಂದು ರಾಜ್ಯದ ವಿವಿಧ ಕಲಾ ತಂಡಗಳಿಂದ ಜನಪದ ಜಾತ್ರೆ ಹಾಗೂ ಪುರುಷರ ಹೊನಲು ಬೆಳಕಿನ ಅವಿಭಜಿತ ಪ್ರೊ ಕಬಡ್ಡಿ ಪಂದ್ಯಾಟ ಜರಗಲಿದೆ. ಡಿ. 31ರಂದು ಹೆಸರಾಂತ ಕಲಾವಿದರು ಹಾಗೂ ಕಲರ್ಸ್‌ ಕನ್ನಡ ವಾಹಿನಿಯ ಕನ್ನಡ ಕೋಗಿಲೆ ಖ್ಯಾತಿಯ ಕಲಾವಿದರಿಂದ ಸಂಗೀತ ರಸಮಂಜರಿ ಹಾಗೂ ಜೀ ಕನ್ನಡ ವಾಹಿನಿಯಲ್ಲಿ ನಡೆಯುವ ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ಕಲಾವಿದರಿಂದ “ನೃತ್ಯ ವೈವಿಧ್ಯಮಯ’, ಅಂತಾರಾಷ್ಟ್ರೀಯ ಚಿತ್ರಕಲಾವಿದರಿಂದ ವರ್ಣ ವಸಂತ ಚಿತ್ರ ಪ್ರದರ್ಶನ ಹಾಗೂ ಕೇರಳ ಕಲಾವಿದರಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ಜರಗಲಿದೆ. ಪ್ರತೀ ದಿನವೂ ಸಂಜೆ 5.30ರ ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

Advertisement

ಕಾಪು ಲೈಟ್‌ ಹೌಸ್‌ ಉತ್ಸವ
2020ರ ಜನವರಿ ಅಂತ್ಯಕ್ಕೆ ಕಾಪು ಲೈಟ್‌ ಹೌಸ್‌ ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next