Advertisement
ಪುತ್ತೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿ, ದ.ಕ. ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿ ಬದಲಾವಣೆ ಅಥವಾ ಯಾರು ಎನ್ನುವ ಬಗ್ಗೆ ಮಾಹಿತಿ ಇಲ್ಲ. ಅದೇನಿದ್ದರೂ ಪಕ್ಷದ ಹೈಕಮಾಂಡ್ ಹಂತದಲ್ಲಿ ತೀರ್ಮಾನವಾಗಲಿದೆ. ಪ್ರಸ್ತುತ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸ ಮಾಡುತ್ತಿದ್ದು ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ. ಮೋದಿ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರುವುದೇ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಸ್ವಯಂಪ್ರೇರಿತರಾಗಿ ಚುನಾವಣ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇದು ಮಾದರಿ ನಡೆ. ಪಕ್ಷ ಅವರಿಗೆ ಕೊಟ್ಟ ಅವಕಾಶವನ್ನು ಸ್ಮರಿಸುತ್ತ ಇನ್ನು ಮುಂದೆ ಪಕ್ಷಕೋಸ್ಕರ ಕೆಲಸ ಮಾಡುವುದಾಗಿ ತೀರ್ಮಾನ ಮಾಡಿದ್ದಾರೆ. ಇಂತಹ ನಿರ್ಧಾರ ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಎಲ್ಲವೂ ಸರಿ ಆಗುತ್ತದೆ
ಪುತ್ತೂರಿನಲ್ಲಿ ಬಿಜೆಪಿ ಎರಡು ಬಣವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆ ವಿಚಾರದಲ್ಲಿ ನನ್ನನ್ನು ಮಧ್ಯೆ ತರಬೇಡಿ. ಇದು ಜಿಲ್ಲಾಧ್ಯಕ್ಷರು, ರಾಜ್ಯಾಧ್ಯಕ್ಷರ ವ್ಯಾಪ್ತಿಗೆ ಒಳಪಟ್ಟಿದ್ದು. ಎಲ್ಲವೂ ಸರಿಯಾಗುವ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.
Related Articles
ಪುತ್ತೂರು ತಾಲೂಕಿನ ಅರಿಯಡ್ಕ, ಒಳಮೊಗ್ರು ಗ್ರಾ.ಪಂ.ನಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಕೋಟ ಶ್ರೀನಿವಾಸ ಪೂಜಾರಿ ಪರ್ಲಡ್ಕದ ಕೋಟ ಶಿವರಾಮ ಕಾರಂತರ ಬಾಲವನಕ್ಕೆ ಭೇಟಿ ನೀಡಿ ಅಲ್ಲಿನ ಪ್ರಗತಿ ಪರಿಶೀಲಿಸಿದರು.
Advertisement