Advertisement

Journalist Association: ದ.ಕ. ಜಿಲ್ಲಾ ಪತ್ರ ಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ

01:07 PM Nov 11, 2023 | Team Udayavani |

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ  ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ನ.11ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

Advertisement

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ, ಹಿರಿಯ ಪತ್ರಕರ್ತರಾದ ಆರ್.ಎನ್. ಪೂವಣಿ, ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next