Advertisement

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

12:20 AM Jan 07, 2025 | Team Udayavani |

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಫೆ.21 ಮತ್ತು 22ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ| ಪ್ರಭಾಕರ ಶಿಶಿಲ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್‌ ತಿಳಿಸಿದ್ದಾರೆ.

Advertisement

ಡಾ| ಪ್ರಭಾಕರ ಶಿಶಿಲ ಕುರಿತು: ಸುಳ್ಯ ತಾಲೂಕಿನ ಕೂತುಕುಂಜ ಕಜೆಯಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಬೆಳೆದು, ಸುಳ್ಯದಲ್ಲಿ ನೆಲೆಸಿರುವ ಡಾ| ಪ್ರಭಾಕರ ಶಿಶಿಲರು ಕನ್ನಡದ ಶ್ರೇಷ್ಠ ಸಾಹಿತಿ. ಕನ್ನಡದಲ್ಲಿ 10 ಕಾದಂಬರಿ, 8 ಕಥಾ ಸಂಕಲನ, 5 ಪ್ರವಾಸ ಕಥನ ಸೇರಿ ಒಟ್ಟು 54 ಸೃಜನಶೀಲ ಕೃತಿಗಳು, 165 ಅರ್ಥಶಾಸ್ತ್ರ ವಿಚಾರ ಸಾಹಿತ್ಯ ಕೃತಿಗಳು ಹಾಗೂ ಆಂಗ್ಲ ಭಾಷೆಯಲ್ಲಿ 10 ಅರ್ಥಶಾಸ್ತ್ರ ಕೃತಿಗಳನ್ನು ರಚಸಿದ್ದಾರೆ.

ವಿವಿಧ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ಇವರ ಸುಮಾರು 250ಕ್ಕೂ ಅಧಿಕ ಲೇಖನಗಳು ಪ್ರಕಟವಾಗಿವೆ. ಅನೇಕ ಲಾವಣಿ ಮತ್ತು ಗೀಗೀ ಪದ ರಚಿಸಿದ್ದಾರೆ. ಇವರು ಬರೆದ ಪುಂಸ್ತ್ರೀ ಕೃತಿ ಸಂಸ್ಕೃತ, ಹಿಂದಿ, ಮಲಯಾಳಂ, ತೆಲುಗು, ತಮಿಳು, ತುಳು, ಕೊಂಕಣಿ, ಮರಾಠಿ, ಅರೆಭಾಷೆ, ಕೊಡವ, ಗುಜರಾಥಿ, ಬೆಂಗಾಲಿ, ಪಂಜಾಬಿ, ಇಂಗ್ಲಿಷ್‌ ಭಾಷೆಗಳಿಗೆ ಅನುವಾದಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next