Advertisement
ಬೆಳ್ತಂಗಡಿ, ಮುಂಡಾಜೆ, ಚಾರ್ಮಾಡಿ, ಗುರುವಾಯನಕೆರೆ, ಕೊಯ್ಯೂರು, ಮಡಂತ್ಯಾರು, ಧರ್ಮಸ್ಥಳ ಸಹಿತ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ಕರಾವಳಿ ಭಾಗದಲ್ಲಿ ಮಳೆ ಮುಂದು ವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ ಮೇ 19ರಿಂದ 22ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.
Related Articles
ಬೆಳ್ತಂಗಡಿ: ತಾಲೂಕಿನ ಬಹುತೇಕ ಭಾಗಗಳಲ್ಲಿ ಶನಿವಾರ ಗುಡುಗು, ಮಿಂಚು ಸಹಿತ ಒಂದು ತಾಸಿಗೂ ಅಧಿಕ ಕಾಲ ಭಾರಿ ಮಳೆಯಾಗಿದೆ. ಸಂಜೆ 4ರ ಸುಮಾರಿಗೆ ಆರಂಭವಾದ ಮಳೆ ಬಿರುಸಾಗಿ ಸುರಿದು, ಬಳಿಕ ತಡರಾತ್ರಿವರೆಗೂ ಮುಂದುವರಿಯಿತು. ಮದ್ದಡ್ಕ ಪೇಟೆಯಲ್ಲಿ ಅಂಗಡಿಗೆ ನೀರು ನುಗ್ಗಿದೆ. ಉಜಿರೆ ಪ್ರದೇಶದಲ್ಲಿ ಚರಂಡಿಗಳು ಬ್ಲಾಕ್ ಆಗಿದ್ದು ಮಳೆ ನೀರು ರಸ್ತೆ ಮೇಲೆ ಹರಿಯಿತು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುವ ಕಡೆ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಮಳೆಯೊಂದಿಗೆ ಸಿಡಿಲು, ಗುಡುಗು ಆರ್ಭಟದಿಂದ ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ವಿದ್ಯುತ್ ವ್ಯತ್ಯಯವಾಯಿತು.
Advertisement
ಮೀನುಗಾರರಿಗೆ ಎಚ್ಚರಿಕೆಭಾರತೀಯ ಹವಾಮಾನ ಇಲಾಖೆ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮೇ 18 ರಿಂದ 22ರವರೆಗೆ ಬಂಗಾಲಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಸಾಧ್ಯತೆ ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.