Advertisement

Kerala ಚುನಾವಣ ಕಾರ್ಯ ನಿರತ ದ.ಕ. ಅರ್ಹ ಮತದಾರರಿಗೆ ಅವಕಾಶ

01:11 AM Apr 22, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುವ ಎ. 26ರಂದೇ ಕೇರಳ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಲೋಕಸಭೆಗೆ ಮತದಾನ ನಡೆಯಲಿದೆ.

Advertisement

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅರ್ಹ ಮತದಾರರಾಗಿರುವ ಕೆಲವು ಅಧಿಕಾರಿಗಳು ಹಾಗೂ ಸಿಬಂದಿ ಕೇರಳದ ಯಾವುದೇ ಜಿಲ್ಲೆಯಲ್ಲಿ ಚುನಾವಣ ಕರ್ತವ್ಯಕ್ಕೆ ನಿಯೋಜಿತರಾಗಿದ್ದಲ್ಲಿ ಅವರಿಗೆ ಪೋಸ್ಟಲ್‌ ಬ್ಯಾಲೆಟ್‌ ಮೂಲಕ ಮತದಾನ ಮಾಡಲು ವಿಒಇಡಿ (ವೋಟರ್‌ ಆನ್‌ ಎಲೆಕ್ಷನ್‌ ಡ್ನೂಟಿ)ಯಡಿ ಅವಕಾಶ ಕಲ್ಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅಂತಹ ವಿಒಇಡಿ ವೋಟರ್‌ಗಳು ಕೇರಳದ ಸಕ್ಷಮ ಪ್ರಾಧಿಕಾರಿಗಳಾಗಿರುವ ಜಿಲ್ಲಾ ಚುನಾವಣಾಧಿಕಾರಿ ನೀಡಿರುವ ಚುನಾವಣೆ ಕರ್ತವ್ಯದ ಆದೇಶ ಹಾಗೂ ನಮೂನೆ 12ರೊಂದಿಗೆ ಖುದ್ದಾಗಿ ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಯವರ ಕಚೇರಿಯ 3ನೇ ಮಹಡಿ ಯಲ್ಲಿರುವ ಮೀಸಲಾಗಿರುವ ಕೊಠಡಿಗೆ ಆಗಮಿಸಿದಲ್ಲಿ ಅಲ್ಲಿ ಅವರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡುವ ಅವಕಾಶ ಒದಗಿಸಲಾಗುತ್ತದೆ.

ಈ ಅಂಚೆ ಮತದಾನ ಪ್ರಕ್ರಿಯೆ ಎ. 22ರಿಂದ 24ರ ವರೆಗೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೂ ಲಭ್ಯ ವಿರುತ್ತದೆ. ಇದೇ ರೀತಿಯ ಸವಲತ್ತನ್ನು ದ.ಕ. ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜಿತ ರಾಗಿರುವ ಕೇರಳ ರಾಜ್ಯದ ವಿಒಇಡಿ ವೋಟರ್ಸ್‌ಗಳಿಗೂ ಕಲ್ಪಿಸಲಾಗಿದ್ದು, ಈ ಬಗ್ಗೆ ಅಲ್ಲಿನ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಕೇರಳ ರಾಜ್ಯದ ವಿಒಇಡಿ ಮತದಾರರು ಅಂಚೆ ಮತದಾನ ಮಾಡಲು ಸಂಬಂಧಿಸಿದ ಸಕ್ಷಮ ವ್ಯಾಪ್ತಿಯ ಜಿಲ್ಲಾ ಚುನಾವಣಾಧಿ ಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ದ.ಕ. ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್‌ ಎಂ.ಪಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next