Advertisement

ದ.ಕ.: ‌ಚುನಾವಣ ಅಖಾಡ ಆಪ್‌ನಿಂದ 8 ಕೇತ್ರಗಳಲ್ಲೂ ಸ್ಪರ್ಧೆ ಕಣಕ್ಕಿಳಿಯದ ಎಡಪಕ್ಷಗಳು!

01:51 PM Apr 26, 2023 | Team Udayavani |

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಬಹುತೇಕವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಮುಖಾಮುಖಿ ನಡೆಯಲಿರುವುದು ಸ್ಪಷ್ಟ. ಹಾಗಿದ್ದರೂ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ತನ್ನ ಅಸ್ತಿತ್ವ ತೋರ್ಪಡಿಸಿರುವ ಆಮ್‌ ಆದ್ಮಿ ಪಕ್ಷ (ಆಪ್‌) ದ.ಕ. ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Advertisement

ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಪರಿಚಯಿಸುವ ಮೂಲಕ ಹೊಸನತಕ್ಕೆ ನಾಂದಿ
ಹಾಡಿವೆ. ಇವೆಲ್ಲದರ ನಡುವೆ, ಕಳೆದ ಕೆಲ ಚುನಾವಣೆಗಳಲ್ಲಿ ಕೆಲವು ಕ್ಷೇತ್ರಗಳಲ್ಲಾದರೂ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿದ್ದ ಸಿಪಿಐ ಹಾಗೂ ಸಿಪಿಎಂ ಪಕ್ಷಗಳು ಈ ಬಾರಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್‌ ಈ ಬಾರಿ ಮಂಗಳೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲೆಡೆ ಸ್ಪರ್ಧೆಯಲ್ಲಿದೆ. ಎಸ್‌ಡಿಪಿಐ ಕೂಡ ಮುಸ್ಲಿಂ ಬಾಹುಳ್ಯವುಳ್ಳ ಕ್ಷೇತ್ರಗಳಾದ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಮೂಡುಬಿದಿರೆಯಲ್ಲಿ ಅಭ್ಯರ್ಥಿಗಳನ್ನು
ಕಣಕ್ಕಿಳಿಸಿ ಸ್ಪರ್ಧೆಯೊಡ್ಡಿದೆ. ಈ ನಡುವೆ 10 ಮಂದಿ ಪಕ್ಷೇತರರ ಸಹಿತ ಮಾನ್ಯತೆ ಪಡೆಯದ ಪಕ್ಷಗಳು (ಎಸ್‌ಡಿಪಿಐ, ಕರ್ನಾಟಕ ರಾಷ್ಟ್ರ ಸಮಿತಿ, ಉತ್ತಮ ಪ್ರಜಾಕೀಯ ಪಾರ್ಟಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ, ಅಖಿಲ ಭಾರತ ಹಿಂದೂ ಮಹಾಸಭಾ ಸಮಿತಿ, ಸರ್ವೋದಯ ಕರ್ನಾಟಕ ಪಕ್ಷ, ತುಳುವೆರೆ ಪಕ್ಷ , ಹಿಂದೂಸ್ತಾನ್‌ ಜನತಾಪಾರ್ಟಿ ಸೆಕ್ಯುಲರ್‌ ಸಹಿತ) ಸೇರಿ ಒಟ್ಟು 29 ಮಂದಿ ಇತರರು ಕಣದಲ್ಲಿದ್ದು, ಬಿರುಸಿನ ಮತಬೇಟೆ ನಡೆಯುತ್ತಿದೆ.

ಮೊಯ್ದೀನ್ ಬಾವಾ ಸ್ಪರ್ಧೆಯಿಂದ ಜೆಡಿಎಸ್‌ನಲ್ಲಿ ಹುಮ್ಮಸ್ಸು ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಕೆಯ ಕೊನೆಯ ದಿನದವರೆಗೂ ಟಿಕೆಟ್‌ ದೊರೆಯುವ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಜೆಡಿಎಸ್‌ ಪಕ್ಷದಿಂದ ಮಂಗಳೂರು ನಗರ ಉತ್ತರ ಕ್ಷೇತ್ರದಿಂದ ಕಣಕ್ಕಿಳಿದಿರುವುದು ಕುತೂಹಲ ಮೂಡಿಸಿದೆ.

ಕಳೆದ ಹಲವು ಚುನಾವಣೆಗಳಿಂದೀಚೆಗೆ ಜಿಲ್ಲೆಯಲ್ಲಿ ಕ್ಷೀಣವಾಗುತ್ತ ಸಾಗಿದ್ದ ಜೆಡಿಎಸ್‌ ನಲ್ಲಿ ಈ ಬೆಳವಣಿಗೆ ಹೊಸ ಹುಮ್ಮಸ್ಸು ಮೂಡಿಸಿದೆ.

Advertisement

ಪ್ರಬಲ ಬಂಡಾಯ ಅಭ್ಯರ್ಥಿಗಳ ಕಣ ಪುತ್ತೂರು ಪುತ್ತೂರಿನಲ್ಲಿ ಬಿಜೆಪಿಯಿಂದ ಬಂಡಾಯವೆದ್ದು, ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಅರುಣ್‌ ಕುಮಾರ್‌ ಪುತ್ತಿಲ ಅವರು ಪಕ್ಷೇತರರಾಗಿ ಕಣಕ್ಕಿಳಿದಿರುವುದು ಹಾಗೂ ಕಾಂಗ್ರೆಸ್‌ನಿಂದ ಟಿಕೆಟ್‌ ಸಿಗದೆ ಜೆಡಿಎಸ್‌ ನಿಂದ ಸ್ಪರ್ಧಿಸಿರುವ ದಿವ್ಯಪ್ರಭಾ ಚಿಲ್ತಡ್ಕ ಅವರ ಸ್ಪರ್ಧೆ ರಾಜಕೀಯ ರಣರಂಗದಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕೇವಲ ಕ್ಷೇತ್ರದ ಮತದಾರರು ಮಾತ್ರವಲ್ಲದೆ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next