Advertisement

ಡಿ.ಕೆ. ಶಿವಕುಮಾರ್‌ ಜತೆ ಉಪಾಹಾರ ಸಭೆ- ಡಿಸಿಎಂ ಜತೆ ಚರ್ಚಿಸಿದ ಸಚಿವರು,ಶಾಸಕರು,ಮಾಜಿ ಶಾಸಕರು

12:22 AM Nov 10, 2023 | Team Udayavani |

ಬೆಂಗಳೂರು: ಬಣ ರಾಜಕಾರಣ ದಿನದಿಂದ ದಿನಕ್ಕೆ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಮಧ್ಯೆಯೇ ಗುರುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಕೆಲವು ಸಚಿವರು ಮತ್ತು ಶಾಸಕರ ನಿಯೋಗ ಭೇಟಿಯಾಗಿ ಉಪಾಹಾರ ಸಭೆ ನಡೆಸಿದೆ.

Advertisement

ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾದ ಸಚಿವರು, ಶಾಸಕರು, ಮಾಜಿ ಶಾಸಕರ ನಿಯೋಗ, ಸ್ವಲ್ಪ ಹೊತ್ತು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಡಿಸಿಎಂ ದಿಢೀರ್‌ ದಿಲ್ಲಿ ಭೇಟಿ ಮುಗಿಸಿ ಹಿಂದಿರುಗಿದ ಬೆನ್ನಲ್ಲೇ ಈ ನಿಯೋಗದೊಂದಿಗೆ ಸಭೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ ಎನ್ನಲಾಗಿದೆ.

ಉಪಾಹಾರ ಸಭೆಯಲ್ಲಿ ಸಚಿವರಾದ ಶಿವಾನಂದ ಪಾಟೀಲ್‌, ಸಂತೋಷ್‌ ಲಾಡ್‌, ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಮ್‌, ಶಾಸಕರಾದ ಜಿ.ಎಸ್‌. ಪಾಟೀಲ್‌, ತರೀಕೆರೆ ಶ್ರೀನಿವಾಸ್‌, ಶಾಂತನಗೌಡ, ದರ್ಶನ್‌ ಧ್ರುವನಾರಾಯಣ, ರವಿಶಂಕರ್‌, ಮಾನಪ್ಪ ವಜ್ಜಲ್‌, ಡಾ| ರಂಗನಾಥ್‌, ವಿಧಾನ ಪರಿಷತ್‌ ಸದಸ್ಯ ಸುನೀಲ ಪಾಟೀಲ್‌, ಮಾಜಿ ಸಚಿವರಾದ ಬಾಬುರಾವ್‌ ಚಿಂಚನಸೂರ, ಶಿವರಾಂ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮುಂತಾದವರಿದ್ದರು.

ನಿಯೋಗದೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಿತ್ಯ ಬೆಳಗ್ಗೆ ಕನಿಷ್ಠ ಅರ್ಧಗಂಟೆ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರ ಭೇಟಿಗೆ ಸಮಯ ಮೀಸಲಿಡುತ್ತೇನೆ. ಈ ಅವಧಿಯಲ್ಲಿ ತಮ್ಮ ಕ್ಷೇತ್ರದ ಕೆಲಸ ಮತ್ತು ಕುಂದುಕೊರತೆಗಳನ್ನು ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಪ್ರತಿದಿನ ಬೆಳಗ್ಗೆ 10ರಿಂದ 10.30ರ ವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ಹೊರಗಡೆ ಹೋಗುವ ದಿನ ಹೊರತುಪಡಿಸಿ, ಉಳಿದ ಎಲ್ಲ ದಿನವೂ ಸಮಯಾವಕಾಶ ನೀಡಲಾಗುವುದು ಎಂದು ತಿಳಿಸಿದರು.

Advertisement

ದಿಲ್ಲಿ ಭೇಟಿ ಬಗ್ಗೆ ಪ್ರಶ್ನಿಸಿದಾಗ, ಪಕ್ಷದಲ್ಲಿ ಯಾರೆಲ್ಲ 3ಕ್ಕಿಂತ ಹೆಚ್ಚು ವರ್ಷಗಳಿಂದ ಪದಾಧಿಕಾರಿಗಳಾಗಿದ್ದಾರೋ ಅವರ ಸ್ಥಾನಕ್ಕೆ ಬೇರೆಯವರಿಗೆ ಅವಕಾಶ ನೀಡಬೇಕೆಂಬ ಚರ್ಚೆ ಆಗಿದೆ. ಜತೆಗೆ ಲೋಕಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಶೇ.75ರಷ್ಟು ಮಂತ್ರಿಗಳು ತಮ್ಮ ಜಿÇÉೆಗಳಿಗೆ ಹೋಗಿ ಸಭೆ ಮಾಡಿ¨ªಾರೆ. ಉಳಿದವರು ಸಭೆ ಮಾಡಿ ಆದಷ್ಟು ಬೇಗ ತಮ್ಮ ವರದಿ ನೀಡಲಿ¨ªಾರೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳ ಪರಿಶೀಲನೆ ಬಗ್ಗೆ ಕೇಳಿದಾಗ, ಬಹಳ ಸಂತೋಷ. ಅವರು ಅಲ್ಲಿಗೆ ಹೋಗಲಿ. ಅವರಿಗೆ ಬೇಕಾದರೆ ಬಸವರಾಜ ಬೊಮ್ಮಾಯಿ ಹಾಗೂ ಲೋಕಾಯುಕ್ತ ವರದಿಗಳನ್ನು ಕಳುಹಿಸಿಕೊಡುತ್ತೇನೆ ಎಂದು ತೀಕ್ಷ್ಣವಾಗಿ ಹೇಳಿದರು.
ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂ ಕೋರ್ಟ್‌ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next