ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ.
ನ್ಯಾಯಾಂಗ ಬಂಧನದಲ್ಲಿರುವ ಡಿ ಕೆ ಶಿವಕುಮಾರ್ ಅವರು ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆ ನಂತರ ಡಿ ಕೆ ಶಿವಕುಮಾರ್ ಜಾಮೀನು ಅರ್ಜಿಗಾಗಿ ದೆಹಲಿಯ ಉಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾ. ಸುರೇಶ್ ಕುಮಾರ್ ಅವರ ಏಕಸದಸ್ಯ ಪೀಠದ ಮುಂದೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
ಅಕ್ಟೋಬರ್ ಒಂದಕ್ಕೆ( ಮಂಗಳವಾರ) ಡಿ ಕೆ ಶಿವಕುಮಾರ್ ನ್ಯಾಯಾಂಗ ಬಂಧನದ 14 ದಿನಗಳ ಅವಧಿ ಅಂತ್ಯವಾಗುವ ಹಿನ್ನಲೆ ಡಿ ಕೆ ಶಿವಕುಮಾರ್ ಇಡಿ ಕೋರ್ಟ್ ಮುಂದೆ ಹಾಜರಾಗಬೇಕಿದೆ.