Advertisement

ಡಿಕೆಶಿ ಮತ್ತು ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ನಳಿನ್ ಕಟೀಲ್

01:01 PM Jan 02, 2021 | Team Udayavani |

ಶಿವಮೊಗ್ಗ: ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಮನಗಂಡಿದ್ದಾರೆ. ಅವರು ಭಯದಲ್ಲಿ ಅತಂತ್ರ ಸ್ಥಿತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement

ಬಿಜೆಪಿ ಕಾರ್ಯಕಾರಣಿ ಹಾಗೂ ವಿಶೇಷ ಸಭೆ ಇರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ರಾಜಿನಾಮೆ ನೀಡುವುದು ಒಳ್ಳೆಯದು ಎಂದು, ಡಿ.ಕೆ. ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

ಇದನ್ನೂ ಓದಿ:ಗ್ರಾಮ ಪಂಚಾಯತಿ ಚುನಾವಣೆ ಸಿಟ್ಟಿನಿಂದ ಜಾನುವಾರುಗಳ ಸಜೀವ ದಹನ ಮಾಡಿದ ದುಷ್ಕರ್ಮಿಗಳು!

ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಬಗ್ಗೆ ಚರ್ಚಿಸಲಾಗುವುದು. ನಾಳಿನ ವಿಶೇಷ ಸಭೆಯಲ್ಲೂ ಚರ್ಚೆ ನಡೆಸಲಾಗುವುದು.  ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗಕ್ಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಸಕ್ರೆಬೈಲು ಆನೆ ಬಿಡಾರದ ಬಳಿ ಭವ್ಯ ಸ್ವಾಗತ ಕೋರಲಾಯಿತು. ಆನೆಯ ಮೂಲಕ ನಳಿನ್ ಕುಮಾರ್ ಕಟೀಲ್ ಅವರಿಗೆ ಹೂವಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next