Advertisement

ಐಟಿ ವಿಚಾರಣೆಗೆ ಹಾಜರಾದ ಡಿಕೆಶಿ

08:25 AM Oct 06, 2017 | Team Udayavani |

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಗುರುವಾರ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ಕೆಲವು ದಾಖಲೆಗಳನ್ನು ಸಲ್ಲಿಸಿದರು. ಸಮನ್ಸ್‌ ಜಾರಿ ಹಿನ್ನೆಲೆಯಲ್ಲಿ ಗುರುವಾರ ಐಟಿ ಕಚೇರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್‌ ಅವರನ್ನು 2 ಗಂಟೆಗಳಿಗೂ ಅಧಿಕ ಕಾಲ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು. ಬಳಿಕ ಪತ್ರಕರ್ತರ ಜತೆ ಮಾತನಾಡಿದ ಸಚಿವ ಶಿವಕುಮಾರ್‌, ಐಟಿ ಅಧಿಕಾರಿಗಳು ಕೆಲವು ದಾಖಲೆಗಳನ್ನು ನೀಡುವಂತೆ ಕೇಳಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಿ ದಾಖಲೆ ಸಲ್ಲಿಸಿದ್ದೇನೆ. ಮುಂದಿನ ವಾರ ಕೂಡ ಹಾಜರಾಗುವಂತೆ ತಿಳಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next