ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪ ಎದು ರಿಸುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲಿಗೆ ನ್ಯಾಯಾಲಯದಲ್ಲಿ ಗುರುವಾರ ನಿರ್ಣಾಯಕ ದಿನವಾಗಲಿದೆ. ಪ್ರಕರಣದ ತನಿಖೆಗೆ ಎಂದು ಸಿಬಿಐಗೆ ನೀಡಲಾ ಗಿದ್ದ ಅನುಮತಿ ಯನ್ನು ವಾಪಸ್ ಪಡೆದಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರಕಾರದ ಅವಧಿಯಲ್ಲಿ ಅನುಮತಿಯನ್ನು ನೀಡಲಾಗಿತ್ತು.ಅದನ್ನು ಈಗಿನ ಸರಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿ ಸಿದ್ದ ಪ್ರತ್ಯೇಕ ಅರ್ಜಿ ಸಂಬಂಧ ಕಾದಿರಿಸಿದ್ದ ತೀರ್ಪನ್ನು ನ್ಯಾ| ಕೆ. ಸೋಮ ಶೇಖರ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ಪ್ರಕಟಿಸಲಿದೆ.
ಏನಿದು ಪ್ರಕರಣ? ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಪ್ರಕರಣ ಸಂಬಂಧ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ 2019ರ ಸೆ. 25ರಂದು ಆದೇಶ ಹೊರಡಿಸಲಾಗಿತ್ತು. ಅದರಂತೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳಡಿ 2020ರ ಅಕ್ಟೋಬರ್‌ನಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿತ್ತು. ಅದನ್ನು ರದ್ದುಪಡಿಸಬೇಕು ಎಂದು ಶಿವಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2023ರ ಫೆಬ್ರವರಿಯಲ್ಲಿ ನ್ಯಾಯಾಲಯ ಸಿಬಿಐ ತನಿಖೆಗೆ ಮಧ್ಯಾಂತರ ತಡೆ ನೀಡಿತ್ತು. ಇದೇ ವೇಳೆ ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಡಿಕೆಶಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು,ಅದನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅದರ ವಿರುದ್ಧ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ಬಾಕಿ ಇದ್ದಾಗಲೇ ಸಿಬಿಐ ತನಿಖೆಗೆ ಹಿಂದಿನ ಸರಕಾರ ನೀಡಿದ್ದ ಅನುಮತಿಯನ್ನು ಈಗಿನ ರಾಜ್ಯ ಸರಕಾರ 2023ರ ನವೆಂಬರ್‌ನಲ್ಲಿ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಬಸವನಗೌಡ ಪಾಟೀಲ್ ಯತ್ನಾಳ್ 2023ರ ಡಿಸೆಂಬರ್ ಹಾಗೂ 2024ರ ಜನವರಿ ಯಲ್ಲಿ ಸಿಬಿಐ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಭಾಗೀಯ ನ್ಯಾಯಪೀಠ ಆಗಸ್ಟ್ 12ರಂದು ತೀರ್ಪು ಕಾದಿರಿಸಿತ್ತು.
ಏನಿದು ಪ್ರಕರಣ?
-ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣ
-2019ರ ಸೆ.25ರಂದು ಸಿಬಿಐಗೆ ಕೇಸ್ ವಹಿಸಿದ್ದ ಆಗಿನ ಸಿಎಂ ಬಿ.ಎಸ್.ಯಡಿಯೂರಪ್ಪ
-2023ರ ನವೆಂಬರ್‌ನಲ್ಲಿ ಸಿಬಿಐ ತನಿಖೆ ಆದೇಶ ಹಿಂಪ ಡೆದ ಸರಕಾರ
-ಈ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಬಸನಗೌಡ ಯತ್ನಾಳ್
-ಪ್ರಕರಣ ಸಿಬಿಐಗೆ ವಹಿಸಿದ್ದು ಸರಿಯೋ, ತಪ್ಪೋ?: ಇಂದು ನಿರ್ಧಾರ