Advertisement

D.K. Shivakumar ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

12:06 AM Aug 13, 2024 | Team Udayavani |

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿರುವ ಪ್ರಕರಣದ ತನಿಖೆಗಾಗಿ ಹಿಂದಿನ ಬಿಜೆಪಿ ಸರಕಾರ ನೀಡಿದ್ದ ಅನುಮತಿಯನ್ನು ಈಗಿನ ಕಾಂಗ್ರೆಸ್‌ ಸರಕಾರ ವಾಪಸ್‌ ಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ.

Advertisement

ರಾಜ್ಯ ಸರಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ಕುರಿತು ಸೋಮವಾರ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್‌ ಹಾಗೂ ನ್ಯಾ| ಉಮೇಶ್‌ ಎಂ. ಅಡಿಗ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣದ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ಹೇಳಿತು. ಸಿಬಿಐ ಪರ ವಿಶೇಷ ಸರಕಾರಿ ಅಭಿಯೋಜಕ ಪಿ. ಪ್ರಸನ್ನಕುಮಾರ್‌, ರಾಜ್ಯ ಸರಕಾರದ ಪರ ಕಪಿಲ್‌ ಸಿಬಲ್‌, ಯತ್ನಾಳ್‌ ಪರ ವೆಂಕಟೇಶ್‌ ದಳವಾಯಿ ವಾದ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next