ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನುಡಿದಂತೆ ನಡೆದಿದ್ದಾರೆ, ಮಾತು ತಪ್ಪಿಲ್ಲ. ಬಸವ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿ ವಿಧಾನಸೌಧ ಪ್ರವೇಶ ಮಾಡಿದ್ದ ಅವರು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪೈಕಿ ಶೇ.99ರಷ್ಟು ಕೆಲಸ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಕಿದ್ದರೆ ಈ ಬಗ್ಗೆ ನೇರ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಹ್ವಾನ ನೀಡಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ಧರಾಮಯ್ಯ ವಂಚನೆ ಮಾಡಿದ್ದಾರೆಂದ ನಳಿನ್ ಕುಮಾರ್ ಕಟೀಲ್ ಗೆ ತಿರುಗೇಟು ನೀಡಿದರು.
ಕಾಂಗ್ರೆಸ್ ನಲ್ಲಿ ಮ್ಯಾಸಿಕಲ್ ಚೇರ್ ಆಟ ನಡೆಯುತ್ತಿದೆ ಎಂದ ನಳಿನ್ ಕಟೀಲ್ ಗೆ ತಿರುಗೇಟು ನೀಡಿದ ಅವರು,ಕಾಂಗ್ರೆಸ್ ನಲ್ಲಿ ಮ್ಯೂಸಿಕಲ್ ಚೇರ್ ಆಟ ನಡೆಯುತ್ತಿದೆಯೋ, ಬೇರೆ ಯಾವುದೋ. ಆದರೆಬಿಜೆಪಿಯಲ್ಲಿ ನಡೆಯುತ್ತಿದೆಯಲ್ಲ ಅದು ಯಾವ ಚೇರ್ ಆಟ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕವೂ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸುಪ್ರೀಂ
ಪೆಟ್ರೋಲ್, ಡೀಸೆಲೆ ಬೆಲೆ ಏರಿಕೆ ವಿರುದ್ಧ ಈಗಾಗಲೇ ಕಾಂಗ್ರೆಸ್ ಧರಣಿ ನಡೆಸುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಬಂಡು ಬಿದ್ದು ಹೋಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.