Advertisement

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಿರಬಹುದು ಆದರೆ ನನ್ನ ಮಿತ್ರರೂ ಹೌದು : ಬಿ.ವೈ.ವಿಜಯೇಂದ್ರ

11:40 AM Oct 15, 2021 | Team Udayavani |

ಚಿತ್ರದುರ್ಗ: ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಿರಬಹುದು ಆದರೇ ನನ್ನ ಮಿತ್ರರೂ ಹೌದು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ನಗರದ ಮುರುಘಾ ಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದ ಅನುಭವ ಮಂಟಪದಲ್ಲಿ ಯುವಮೇಳ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ವಿಜಯೇಂದ್ರ ಅವರು ಒಂದೇ ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿ ಕುಳಿತು ಕೆಲ ಹೊತ್ತು ಪರಸ್ಪರ ಮಾತನಾಡಿ ಗಮನ ಸೆಳೆದರು.

ಕಾರ್ಯಕ್ರಮದ ಬಳಿಕ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ವಿಜಯೇಂದ್ರ ,’ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಿರಬಹುದು ಆದರೆ ನನ್ನ ಮಿತ್ರರೂ ಹೌದು. ವೇದಿಕೆಯಲ್ಲಿ ಸಹಜವಾಗಿ ಮಾತನಾಡಿದ್ದೇವೆ.ರಾಜಕೀಯವಾಗಿ ಚರ್ಚಿಸಿಲ್ಲ, ವೈಯಕ್ತಿಕವಾಗಿ ಮಾತನಾಡಿದ್ದೇವೆ’ ಎಂದರು.

ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಭೇಟಿ ವಿಚಾರ ಸುಳ್ಳು.ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯಲ್ಲಿ ಹುರುಳಿಲ್ಲ. ಅವರು ರಾಜಕೀಯ‌ ಪ್ರೇರಿತ ಹೇಳಿಕೆ ನೀಡಿದ್ದಾರೆ ಎಂದರು.

ಗುತ್ತಿಗೆದಾರರ ಮೇಲೆ ಐಟಿ ದಾಳಿಗೂ ಬಿಎಸ್ ಯಡಿಯೂರಪ್ಪ ಅವರಿಗೂ ಸಂಬಂಧವಿಲ್ಲ ಎಂದರು.

Advertisement

ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ರಾಜ್ಯ ಸುತ್ತಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದು, ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ.ಕಾಂಗ್ರೆಸ್ ಪಕ್ಷ‌ ತಿರುಕನ ಕನಸು ಕಾಣುತ್ತಿದ್ದು, ದೇಶದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದೇಶದ ಕೆಲವು ರಾಜ್ಯಗಳಲ್ಲಿ ಮಾತ್ರ ಅವಶೇಷದ ರೂಪದಲ್ಲಿ ಉಳಿದಿದೆ. ಕಾಂಗ್ರೆಸ್ ಏನೇ ಬೊಬ್ಬೆ ಹೊಡೆದರೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.

ಕಾಂಗ್ರೆಸ್ ಪಕ್ಷದ ಆಂತರಿಕ ಬೇಗುದಿ ಮಟ್ಟ ಮೇಲ್ನೋಟಕ್ಕೆ ಸ್ಪಷ್ಟವಾಗಿದ್ದು, ಕಾಂಗ್ರೆಸ್ ಪಕ್ಷ ಮುಗಿಸಲು ವಿಪಕ್ಷಗಳೇ ಬೇಕಿಲ್ಲ.ಪಂಜಾಬ್ ನಲ್ಲಿ ಕಾಂಗ್ರೆಸ್ ಒಡೆದು ಹೋಳಾಗುತ್ತಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಒಡೆದು ಮೂರು ಮನೆ ಆಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next