ಹೊಸದಿಲ್ಲಿ/ ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ನಾಯಕತ್ವ ಕುರಿತಂತೆ ಚರ್ಚೆ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸೋಮವಾರ ದೆಹಲಿಯಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಪದಾಧಿಕಾರಿಗಳ ನೇಮಕ ಹಾಗೂ ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗುವುದು. ನಾನು ಕಳೆದ ಒಂದು ವರ್ಷದಿಂದ ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲವನ್ನೂ ಗಮನಿಸಿದ್ದು ಯಾರು ಕೆಲಸ ಮಾಡಿದ್ದಾರೆ, ಯಾರು ಹೆಸರಿಗೆ ಮಾತ್ರ ಇದ್ದಾರೆ ಎಂಬುದನ್ನು ಗಮನಿಸಿದ್ದೇನೆ. ಕೆಲವೊಂದು ಬದಲಾವಣೆ ಮಾಡಬೇಕಾಗಿದೆ. ಹೀಗಾಗಿ. ಪಕ್ಷದ ನಾಯಕರ ಜತೆ ಮಾತನಾಡಲು ಬಂದಿದ್ದೇನೆ ಎಂದಿದ್ದರು.
ಇದನ್ನೂ ಓದಿ:ದ್ವಿತೀಯ ಹಂತದ ನಾಯಕತ್ವಕ್ಕೆ ಪಂಚತಂತ್ರ! ಸವದಿ, ಅಶೋಕ್, ಬೊಮ್ಮಾಯಿ, ಬೈರತಿ, ಸುಧಾಕರ್ ತಂಡ
ಕೆಪಿಸಿಸಿಗೆ ಕಾರ್ಯಾಧ್ಯಕ್ಷರು ಮಾತ್ರ ಇದ್ದು, ಉಳಿದಂತೆ ಅಧಿಕೃತ ಸಮಿತಿ ಇಲ್ಲ. ಕೆಲವು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳಬದಲಾವಣೆ ಮಾಡಬೇಕಿದೆ. ಸಮಿತಿ ಗಾತ್ರ ಹೆಚ್ಚಿಸಬೇಕೇ, ಇಳಿಸಬೇಕೇ ಎಂಬ ಬಗ್ಗೆ ಎರಡು ಮೂರು ವರ್ಷಗಳಿಂದ ಚರ್ಚೆ ನಡೆದಿದೆ ಎಂದಿದ್ದರು.
ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆ, ಮುಂದಿನ ವಿಧಾನಸಭೆ ಚುನಾವಣೆ, ಅದಕ್ಕೂ ಮೊದಲು ಎದುರಾಗುವ ಉಪ ಚುನಾವಣೆ, ಸ್ಥಳಿಯಾಡಳಿತ ಚುನಾವಣೆಗಳ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದಿದೆ.