ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾಗೌಡ ಪಾಟೀಲ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಬೆಳಗಾವಿ ಸಮೀಪದ ಚಿಕ್ಕಬಾಗೇವಾಡಿಯಲ್ಲಿರುವ ಮಾಜಿ ಸಂಸದ ಬಾಬಾಗೌಡ ಪಾಟೀಲರ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಉಪಚುನಾವಣೆ ಸಂಬಂಧ ಮಾತುಕತೆ ನಡೆಸಿದರು.
ಇದನ್ನೂ ಓದಿ:ಮುದ್ದೇಬಿಹಾಳದಲ್ಲಿ ಸೇವೆಗೆ ಹಾಜರಾದ ಸಿಬ್ಬಂದಿ: ಸಾರಿಗೆ ಬಸ್ ಸಂಚಾರ ಆರಂಭ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಕಾಂಗ್ರೆಸ್ ಸಹ ಹೋರಾಟ ನಡೆಸಿದೆ. ಈಗ ರೈತರು ಸಹ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಚಳವಳಿ ನಡೆಸಿದ್ದು ಅದಕ್ಕೆ ನಮ್ಮ ಪಕ್ಷ ಬೆಂಬಲ ನೀಡಿದೆ ಎಂದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಬೇಕು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಹಾಜರಿದ್ದರು.