Advertisement

ಬೀದಿಬದಿ ವ್ಯಾಪಾರಿಗಳು, ಆಟೋರಿಕ್ಷಾ, ಕ್ಯಾಬ್ ಚಾಲಕರು ಬದುಕಿದ್ದಾಗಲೇ ಪರಿಹಾರ ನೀಡಿ: ಡಿಕೆಶಿ

12:16 PM May 18, 2020 | keerthan |

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳು, ಆಟೋರಿಕ್ಷಾ, ಕ್ಯಾಬ್ ಚಾಲಕರಿಗೆ ಆದಷ್ಟು ಬೇಗ ಮಾಸಿಕ ಹತ್ತು ಸಾವಿರ ಪರಿಹಾರ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳು, ಆಟೋರಿಕ್ಷಾ, ಕ್ಯಾಬ್ ಚಾಲಕರ ನೋಂದಣಿ ಗೊಂದಲ ತಕ್ಷಣ ಬಗೆಹರಿಸಿ. ಅವರು ಬದುಕಿದ್ದಾಗಲೇ ಮಾಸಿಕ 10,000 ರುಪಾಯಿ ಪರಿಹಾರ ನೀಡಿ ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

ಇದರೊಂದಿಗೆ ಲಾಕ್ ಡೌನ್ ಕಾರಣದಿಂದ ಮುಚ್ಚಿರುವ ಜಿಮ್, ಫಿಟ್ನೆಸ್ ಕೇಂದ್ರಗಳನ್ನು ತೆರೆಯಲು ಅವಕಾಶ ಮಾಡಿಕೊಡಿ ಎಂದು ಡಿಕೆಶಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next