ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಭಾಗದವರು. ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎನ್ನುವ ನಿರೀಕ್ಷೆಗಳಿದ್ದವು. ಆದರೆ ಮಹದಾಯಿ, ಕೃಷ್ಣಾ, ಕಾವೇರಿ, ಮೇಕೆದಾಟು ಬಗ್ಗೆ ಚಕಾರ ಎತ್ತುತ್ತಿಲ್ಲ. ಡಬಲ್ ಎಂಜಿನ್ ಸರಕಾರ ಏನು ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದಾರೆ. ಅವರನ್ನು ಕರೆದುಕೊಂಡು ಪ್ರಧಾನಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡರೆ ಸಮಸ್ಯೆಗಳು ಬಗೆಹರಿಯುತ್ತವೆ. ಮಹದಾಯಿ ವಿಚಾರದಲ್ಲಿ ನ್ಯಾಯಾಲಯ ನಮ್ಮ ಪರವಾಗಿ ತೀರ್ಪು ಕೊಟ್ಟಿದೆ. ಯೋಜನೆ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ಯಾವ ಕಾರಣಕ್ಕೆ ಎಂಬುವುದು ಗೊತ್ತಿಲ್ಲ. ಡಬಲ್ ಇಂಜಿನ್ ಸರಕಾರ ಏನು ಮಾಡುತ್ತಿದೆ ಎಂಬುವುದನ್ನು ಜನರು ನೋಡುತ್ತಿದ್ದಾರೆ
ಬಿಜೆಪಿ ಸರಕಾರದಿಂದ ಪ್ರತಿ ದಿನವೂ ಜನರ ಕಿಸೆ ಕಳ್ಳತನವಾಗುತ್ತಿದೆ. ಸಾಮಾನ್ಯರು ಬದುಕು ನಡೆಸಲು ಬಿಜೆಪಿ ಸರಕಾರ ಬಿಡುತ್ತಿಲ್ಲ. ಯಾವ ಕಾರಣಕ್ಕೆ ಬಿಜೆಪಿಗೆ ಮತ ಹಾಕಬೇಕು ಎಂದು ಜನ ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಜನರಿ ತಕ್ಕ ಪಾಠ ಕಲಿಸಲಿದ್ದಾರೆ. ಈ ಉಪ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಆಗುವುದಿಲ್ಲ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆ ಮೂಲಕ ಜನರು ತಮಗೆ ಆಗುತ್ತಿರುವ ನೋವನ್ನು ಹೇಳಿಕೊಳ್ಳಲು ವೇದಿಕೆಯಾಗಿದೆ. ಉಪ ಚುನಾವಣೆಗಳಲ್ಲಿ ಆಡಳಿತ ಹೇಗೆ ದುರ್ಬಳಿಕೆ ಮಾಡಿಕೊಳ್ಳಬೇಕು ಎಂಬುವುದು ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಜನರು ಯಾವುದೇ ಒತ್ತಡ, ಆಮೀಷಗಳಿಗೆ ಒಳಗಾಗದೆ ಮತ ನೀಡಬೇಕು ಎಂದರು.
ಇದನ್ನೂ ಓದಿ:ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ: ಸಿಎಂ ಬೊಮ್ಮಾಯಿ
ಬಿ.ಎಸ್.ಯಡಿಯೂರಪ್ಪ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳುತ್ತಿದ್ದರು. ಹಾಗಾದರೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದು ಯಾವ ಕಾರಣಕ್ಕಾಗಿ. ಬೆಲ್ಲದ ಹಾಗೂ ಯತ್ನಾಳ ಪರೀಕ್ಷೆಯಲು ಓಡಾಡುತ್ತಿದ್ದದ್ದು ಯಾವ ಕಾರಣಕ್ಕೆ ಎಂಬುವುದನ್ನು ತಿಳಿಸಬೇಕು.
ಎರಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದು ಅವರ ರಾಜಕೀಯ ತಂತ್ರವಾಗಿರಬಹುದು. ಬಿಜೆಪಿಗ ಅನುಕೂಲ ಮಾಡಿಕೊಡಲು ಎನ್ನುವುದಾರೆ ಈ ಕುರಿತು ವಿಮರ್ಷೆ ಮಾಡಲು ಮಾಧ್ಯಮಗಳಿಗೆ ಸ್ವಾತಂತ್ರ್ಯವಿದೆ. ಹಿಂದೆ ಹೈಕಮಾಂಡ್ ಸೂಚನೆ ಮೇರೆಗೆ ಸಮ್ಮಿಶ್ರ ಸರಕಾರ ರಚನೆಗೆ ಮುಂದಾಗಿದ್ದೆವು. ಕೊನೆ ಗಳಿಗೆಯವರೆಗೂ ಉಳಿಸಲುವ ಪ್ರಯತ್ನ ಮಾಡಿದ್ದೆವು. ಜ್ಯಾತ್ಯಾತೀಯ ತತ್ವಗಳು ಒಂದಾಗಿರಲಿ ಎನ್ನುವುದು ನಮ್ಮ ಉದ್ದೇಶವಾಗಿತ್ತು ಎಂದರು.