Advertisement
ಉಪಚುನಾವಣೆ ಸೋಲಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ರಾಜರಾಜೇಶ್ವರಿ ನಗರದಲ್ಲಿ ಇಷ್ಟು ಅಂತರದ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಕ್ಷೇತ್ರದಲ್ಲಿ ತೀವ್ರ ಪೈಪೋಟಿಯಿಂದ ಕೆಲವು ಸಾವಿರ ಮತಗಳ ಅಂತರದಲ್ಲಿ ಫಲಿತಾಂಶ ಬರಬಹುದು ಎಂದು ಭಾವಿಸಿದ್ದೆ. ಭವಿಷ್ಯದ ಲೆಕ್ಕಾಚಾರದೊಂದಿಗೆ ನಾವು ನಮ್ಮ ಅಭ್ಯರ್ಥಿಯನ್ನು ಸೂಚಿಸಿದ್ದೆವು. ಒಳ್ಳೆಯ ಅಭ್ಯರ್ಥಿಗೆ ಜನ ಕೂಡ ಸಹಕಾರ ನೀಡಿದ್ದಾರೆ. ಕುಸುಮಾ ಅವರು ಉತ್ತಮ ಹೋರಾಟ ಮಾಡಿದ್ದಾರೆ ಎಂದರು.
Related Articles
Advertisement
ಕೆಪಿಸಿಸಿ ಅಧ್ಯಕ್ಷರಾಗಿ ನಿಮಗೆ ಮೊದಲ ಚುನಾವಣೆ ಇದು, ಸೋತಿದ್ದೀರಿ ಎಂದು ಅನೇಕರು ಹೇಳುತ್ತಿದ್ದಾರೆ. ನಾವು ಮೊದಲ ಚುನಾವಣೆಗಳನ್ನು ಸೋತು ಬಂದಿದ್ದೇನೆ. 1985ರಲ್ಲಿ ಮೊದಲು ಸ್ಪರ್ಧಿಸಿದಾಗ ಸೋತಿದ್ದೆ. ನಂತರ ಗೆದ್ದುಕೊಂಡು ಬಂದಿದ್ದೇನೆ. ಹೀಗಾಗಿ ಸೋಲೇ ಗೆಲುವಿನ ಮೆಟ್ಟಿಲು ಎಂಬುದರ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ಶಿರಾ’ದಲ್ಲಿ ‘ರಾರಾ’ಜಿಸಿದ ಕಮಲ: ಬಿಎಸ್ ವೈ ಮತ್ತಷ್ಟು ಭದ್ರ, ಕೈ ರಣತಂತ್ರ ಛಿದ್ರ
ಕಾಂಗ್ರೆಸ್ ನಲ್ಲಿ ಹೊಸಬರಿಗೂ ಆದ್ಯತೆ:
ಪಕ್ಷಕ್ಕೆ ಯುವಕರು, ಹಿರಿಯರು, ಹಳೆ ನಾಯಕರು, ಹೊಸಬರು ಎಲ್ಲರೂ ಬೇಕು. ಹೀಗಾಗಿ ಯುವ, ಸುಸಂಸ್ಕೃತ ಹಾಗೂ ವಿದ್ಯಾವಂತ ಅಭ್ಯರ್ಥಿ ಆಯ್ಕೆ ಮಾಡಿದೆವು. ನಮ್ಮ ಅಭ್ಯರ್ಥಿ ಬಗ್ಗೆ ಯಾರೂ ಮಾತನಾಡಲು ಸಾಧ್ಯವಾಗಲಿಲ್ಲ. ಮುಂದೆಯೂ ಬೇರೆ ಕ್ಷೇತ್ರಗಳಲ್ಲಿ ಹೊಸಬರನ್ನು ತಯಾರು ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.