ಬೆಳಗಾವಿ: ಕೇಂದ್ರ ರೈಲ್ವೆ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತರದೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಿಲ್ಲೆಯ ಜನರಿಗೆ ದ್ರೋಹ ಮಾಡಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇರ ಆರೋಪ ಮಾಡಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸುರೇಶ್ ಅಂಗಡಿ ದೆಹಲಿಯಲ್ಲಿ ನಿಧನರಾಗಿದ್ದರು. ಅಂಗಡಿಯವರ ಪಾರ್ಥೀವ ಶರೀರ ಬೆಳಗಾವಿಗೆ ತರಬೇಕಿತ್ತು. ಬೆಳಗಾವಿಯಲ್ಲಿ ಅಂತಿಮ ದರ್ಶನಕ್ಕೆ ಕ್ಷೇತ್ರದ ಜನರಿಗೆ ಅವಕಾಶ ಕೊಡಬಹುದಾಗಿತ್ತು. ಈ ಸಂದರ್ಭದಲ್ಲಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗಲಿಲ್ಲ ಎಂದರು.
ಇದನ್ನೂ ಓದಿ:“ಆತ ಯೋಗಿನೋ-ರೋಗಿನೋ” ಉ.ಪ್ರದೇಶ ಸಿಎಂ ಆದಿತ್ಯನಾಥ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜೊತೆ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ ಎಂದರು
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಇಡೀ ಪ್ರಪಂಚಕ್ಕೆ ಕಪ್ಪು ಚುಕ್ಕೆ. ಮನುಕುಲಕ್ಕೆ ಅವಮಾನ ಎಂದು ವಾಗ್ದಾಳಿ ಮಾಡಿದ ಅವರು ಪ್ರವಾಹ ಸಂತ್ರಸ್ತರಿಗೆ ನ್ಯಾಯ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಕಿಡಿಕಾರಿದರು.