Advertisement
ಮೂಡಿಗೆರೆಯಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಡಬಲ್ ಎಂಜಿನ್ ಸರಕಾರ ಜನರ ಬದುಕು ಕಟ್ಟುವ ಕೆಲಸ ಮಾಡಿಲ್ಲ. ಮೂರು ವರ್ಷಗಳಿಂದ ಆಡಳಿತದಲ್ಲಿರುವ ರಾಜ್ಯ ಸರಕಾರ ಜನರ ಜೀವನ ಬದಲಾವಣೆ ಮಾಡುವ ಕಾರ್ಯಕ್ರಮ ಕೈಗೊಳ್ಳದೆ ಪ್ರತೀನಿತ್ಯ ಜನರ ಜೇಬಿಗೆ ಕನ್ನಹಾಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಸರಕಾರದ ದುರಾಡಳಿತ ದಿಂದ ಜನರು ಬೇಸತ್ತು ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷದ ನಾಯಕರು ಮತ್ತು ಮುಖಂಡರ ಮನೆ ಮೇಲೆ ದಾಳಿ ನಡೆಸುತ್ತಿದೆ. ಬಿಜೆಪಿ ಮುಖಂಡರ ಮನೆ ಮೇಲೆ ಏಕೆ ದಾಳಿ ನಡೆಯುತ್ತಿಲ್ಲ ಎಂದು ಪ್ರಶ್ನಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಡಿಕೆಶಿ ದೂರಿದರು.