Advertisement

ಸಿ.ಟಿ. ರವಿಗೆ ಮತಿಭ್ರಮಣೆ: ಡಿ.ಕೆ. ಶಿವಕುಮಾರ್‌

11:33 PM Mar 26, 2023 | Team Udayavani |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದ್ದು, ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ನೀಡುವ ಅಗತ್ಯ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತೀಕ್ಷ್ಣವಾಗಿ ಹೇಳಿದರು.

Advertisement

ಕುಕ್ಕರ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿ ಸಿ.ಟಿ ರವಿ ನೀಡಿರುವ ಹೇಳಿಕೆಗೆ ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಸಿ.ಟಿ. ರವಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಬೇಕು. ರವಿ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು.

ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್‌ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೆ . ಅದರ ವಿಚಾರಣೆ ಇನ್ನೂ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next