Advertisement

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

11:40 PM Apr 25, 2024 | Team Udayavani |

ಬೆಂಗಳೂರು: “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಡೆತ್‌ ಟ್ಯಾಕ್ಸೂ ಇಲ್ಲ; ಬರ್ತ್‌  ಟ್ಯಾಕ್ಸೂ ಹಾಕಲ್ಲ. ನಮ್ಮ ಪ್ರಣಾಳಿಕೆಯಲ್ಲಿರುವ ಅಂಶಗಳು ಮಾತ್ರ ಪಕ್ಷದ ನಿಲುವು. ಅದರಿಂದಾಚೆಗಿನ ಅಂಶಗಳಿಗೂ ಪಕ್ಷಕ್ಕೂ ಸಂಬಂಧವಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಷ್ಟಪಡಿಸಿದರು.

Advertisement

ಸದಾಶಿವ ನಗರದ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡಾ ಅವರದ್ದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಈ ಬಗ್ಗೆ ಪಕ್ಷದಲ್ಲಿ ಚರ್ಚೆ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದೂ ಇಲ್ಲ ಎಂದರು.

ಪಿತ್ರೋಡಾ ಹೇಳಿಕೆ ಬಗ್ಗೆ ಈಗಾಗಲೇ ಜೈರಾಮ್‌ ರಮೇಶ್‌ ಪಕ್ಷದ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್‌ ಟ್ಯಾಕ್ಸೂ, ಬರ್ತ್‌ ಟ್ಯಾಕ್ಸೂ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ ಎಂದರು.

ಮೋದಿ ಪ್ರಧಾನಿ ಆದಾಗ 2,800 ರೂ. ಇದ್ದ ಒಂದು ಗ್ರಾಂ ಚಿನ್ನ ಈಗ 7,500 ರೂ. ಆಗಿದೆ. ನಮ್ಮ ಮಹಿಳೆಯರು ಮಂಗಳಸೂತ್ರ ಹಾಕಲಾಗದಂತೆ ಬಿಜೆಪಿಯವರು ಬೆಲೆ ಏರಿಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಐಟಿ ಅಧಿಕಾರಿಗಳಿಂದ ಬಿಜೆಪಿ ಏಜೆಂಟರಂತೆ ಕೆಲಸ :

Advertisement

ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್‌ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ನಮ್ಮ ನಾಯಕರನ್ನು ಹೆದರಿಸುತ್ತಿದ್ದಾರೆ. ಅವರ ಬಳಿ ಸಿಕ್ಕ ಹಣ ಕಾಂಗ್ರೆಸ್‌ ಪಕ್ಷ ಹಾಗೂ ಡಿ.ಕೆ. ಶಿವಕುಮಾರ್‌ ಅವರ ಹಣ ಎಂದು ಹೇಳಲು ಒತ್ತಾಯಿಸುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಆರೋಪಿಸಿದರು. ಇಡೀ ದಿನ ಅವರನ್ನು ಕೂರಿಸಿಕೊಂಡು ಆ ನಾಯಕರು ಚುನಾವಣೆ ಕೆಲಸ ಮಾಡದಂತೆ ತಡೆಯುತ್ತಿದ್ದಾರೆ. ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆಂದು ದೂರಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ದಾಳಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next