Advertisement
ಜಿಲ್ಲೆಯ ಎಲ್ಲ 16 ಬ್ಲಾಕ್ ಕಾಂಗ್ರೆಸ್ ಸಮಿತಿ ಮಟ್ಟದಲ್ಲಿ ಹಾಗೂ ಪಂಚಾಯತ್ ಮಟ್ಟದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪ್ರಮುಖರು ಹಾಗೂ ಪಕ್ಷದ ಜನಪ್ರತಿನಿಧಿಗಳ ನೇತೃತ್ವದಲ್ಲಿ ಕಾರ್ಯಕ್ರಮ ವೀಕ್ಷಣೆ ವ್ಯವಸ್ಥೆಗೊಳಿಸಲಾಗಿತ್ತು. ಕಾರ್ಯಕ್ರಮದ ಉಸ್ತುವಾರಿಗಾಗಿ ಪ್ರತೀ ಬ್ಲಾಕ್‌ಗೂ ಜಿಲ್ಲಾ ಕಾಂಗ್ರೆಸ್‌ನಿಂದ ಹಾಗೂ ಕೆಪಿಸಿಸಿಯಿಂದ ಓರ್ವ ವೀಕ್ಷಕರನ್ನು ನೇಮಕಗೊಳಿಸಲಾಗಿತ್ತು. ಬೆಂಗಳೂರಿನ ಕಾರ್ಯಕ್ರಮದಂತೆ ದೀಪ ಬೆಳಗಿಸುವುದು, ವಂದೇ ಮಾತರಂ ಗೀತೆ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮಗಳು ಎಲ್ಲ ಕಡೆಗಳಲ್ಲಿ ಜರಗಿತು. ಈ ಕಾರ್ಯಕ್ರಮಕ್ಕಾಗಿ ಡಿಜಟಲ್ ಯೂತ್‌ಗಳ ನೇಮಕ ಮಾಡಲಾಗಿತ್ತು.ಕರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಸೇರಿ ಕಾರ್ಯಕ್ರಮವನ್ನು ವೀಕ್ಷಿಸಿ ಪ್ರತಿಜ್ಞೆ ಸ್ವೀಕರಿಸಿದರು. ಬಂಟ್ವಾಳದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕಳ್ಳಿಗೆಯಲ್ಲಿ ತನ್ನ ನಿವಾಸದಲ್ಲಿ ಕಾರ್ಯಕರ್ತರ ಜತೆ ಪದಗ್ರಹಣ ಕಾರ್ಯಕ್ರಮ ವೀಕ್ಷಿಸಿ ಪ್ರತಿಜ್ಞೆ ಸ್ವೀಕರಿಸಿದರು. ಮೂಡುಬಿದಿರೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ನೇತೃತ್ವದಲ್ಲಿ ವೀಕ್ಷಣೆಗೆ ವ್ಯವಸ್ಥೆಗೊಳಿಸಲಾಗಿತ್ತು. ಮಂಗಳೂರು, ಮಂಗಳೂರು ದಕ್ಷಿಣ ಹಾಗೂ ಉತ್ತರ ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ, ಮೂಡಬಿದಿರೆ, ವಿಧಾನಸಭಾ ಕ್ಷೇತ್ರ ಗಳಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಉಸ್ತುವಾರಿಯೊಂದಿಗೆ ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್ ನಿಯೋಜಿತ ವೀಕ್ಷಕರ ಉಪಸ್ಥಿತಿಯೊಂದಿಗೆ ವಿವಿಧೆಡೆ ಪದಗ್ರಹಣ ವೀಕ್ಷಣೆಗೆ ವ್ಯವಸ್ಥೆಗೊಳಿಸಲಾಗಿತ್ತು. ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಪುತ್ತೂರಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸುಳ್ಯದಲ್ಲಿ ಕೆಪಿಸಿಸಿ ಸದಸ್ಯ ಡಾ| ರಘು, ಮಾಜಿ ಶಾಸಕ ಕುಶಲ ಹಾಗೂ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.