Advertisement

D. K. Shivakumar ದಿಲ್ಲಿಗೆ: ಕುತೂಹಲ; ಸಂಪುಟ ಪುನಾರಚನೆ, ರಾಜ್ಯ ರಾಜಕೀಯ ಚರ್ಚೆ?

12:23 AM Aug 13, 2024 | Team Udayavani |

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಮಂಗಳವಾರ ಹೊಸದಿಲ್ಲಿಯಲ್ಲಿ ದೇಶದ ಎಲ್ಲ ಪ್ರದೇಶ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪಾಲ್ಗೊಳ್ಳಲಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾತುಗಳು ಕೇಳಿಬರುತ್ತಿದ್ದು, ಈ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

Advertisement

ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಆ. 13ರ ಬೆಳಗ್ಗೆ ಬೆಂಗಳೂರಿನಿಂದ ದಿಲ್ಲಿಗೆ ಪ್ರಯಾಣ ಬೆಳೆಸ ಲಿರುವ ಅವರು ಅದೇ ದಿನ ರಾತ್ರಿ ಅಥವಾ ಬುಧವಾರ ಬೆಳಗ್ಗೆ ಬೆಂಗಳೂರಿಗೆ ಮರಳಲಿದ್ದಾರೆ.

ಹರಿಯಾಣ, ಮಹಾರಾಷ್ಟ್ರ, ಝಾರ್ಖಂಡ್‌ ರಾಜ್ಯ ವಿಧಾನ ಸಭೆಗಳಿಗೆ ಚುನಾವಣೆ ಸನ್ನಿಹಿತವಾ ಗುತ್ತಿದ್ದು, ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯೂ ಇದೇ ಸಂದರ್ಭ ಘೋಷಣೆಯಾಗುವ ಸಾಧ್ಯತೆಗಳಿವೆ. ಇದಲ್ಲದೆ ಯುವ ಕಾಂಗ್ರೆಸ್‌ ಚುನಾವಣೆಯೂ ನಡೆ ಯಬೇಕಿದ್ದು, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಸಮಾಲೋಚನೆ ನಡೆ ಯುವ ಸಾಧ್ಯತೆಗಳಿವೆ.

ಕೇಂದ್ರದ ವಿರುದ್ಧ
ಸಮರಕ್ಕೆ ಕರೆ?
ರಾಹುಲ್‌ ಗಾಂಧಿಗೆ ಇ.ಡಿ. ನೋಟಿಸ್‌ ನೀಡಿರುವ ವಿಚಾರ ಮುಂದಿಟ್ಟುಕೊಂಡು ಎಲ್ಲ ರಾಜ್ಯಗಳಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಬೇಕು, ಜನಾಭಿಪ್ರಾಯ ರೂಪಿಸಬೇಕು ಎಂದು ಕರೆ ಕೊಡುವ ಸಾಧ್ಯತೆಗಳಿವೆ.

ಈಗಾಗಲೇ ಕೇಂದ್ರದ ವಿರುದ್ಧ ದಿಲ್ಲಿಯಲ್ಲಿ “ನಮ್ಮ ತೆರಿಗೆ ನಮ್ಮ ಹಕ್ಕು’ ಹೋರಾಟ ನಡೆಸಿದ್ದ ಕರ್ನಾಟಕ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ನಡೆಸಿದ ಮೈಸೂರು ಚಲೋಗೂ ತಿರುಗೇಟು ನೀಡಿದೆ. ಇದೇ ಮಾದರಿಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟಗಳನ್ನು ನಡೆಸಬೇಕು ಎಂಬ ಸೂಚನೆ ರವಾನೆಯಾಗಲಿದೆ ಎನ್ನಲಾಗಿದೆ.

Advertisement

ಸಂಪುಟ ಪುನಾರಚನೆಯ ಗುಸುಗುಸು
ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುಜೇìವಾಲಾ ಮುಡಾ ನಿವೇಶನ ಹಂಚಿಕೆ, ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಸಹಿತ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಬೇಕು, ಸಿಎಂ ಸಿದ್ದರಾಮಯ್ಯ ಪರವಾಗಿ ನಿಲ್ಲಬೇಕು ಎಂದು ಸೂಚಿಸಿದ್ದರು.

ಅಲ್ಲದೆ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ಷಮತೆ ತೋರದ ಸಚಿವರನ್ನು ಕೈಬಿಡುವ ಕುರಿತು ಎಚ್ಚರಿಕೆ ನೀಡಿದ್ದರು. ಇದಕ್ಕೆ ಹಲವು ಸಚಿವರೂ ಬೇಸರಗೊಂಡಿದ್ದರು. ಇದರ ಬೆನ್ನಲ್ಲೇ ಸಂಪುಟ ಪುನಾರಚನೆಯ ಮಾತುಗಳೂ ಕೇಳಿಬಂದಿದ್ದು, ಮಂಗಳವಾರ ಈ ಬಗ್ಗೆ ವರಿಷ್ಠರೊಂದಿಗೆ ಡಿ.ಕೆ. ಶಿವಕುಮಾರ್‌ ಪ್ರತ್ಯೇಕ ಚರ್ಚೆ ನಡೆಸುವ ಸಂಭವವಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next