Advertisement

ಪಾದಯಾತ್ರೆ ಹಿನ್ನೆಲೆ: ಮೇಕದಾಟುವಿಗೆ ಭೇಟಿ ನೀಡಿದ ಡಿಕೆಶಿ

05:00 PM Nov 28, 2021 | Team Udayavani |

ಬೆಂಗಳೂರು: ಮುಂದಿನ ಜನವರಿಯಲ್ಲಿ ಮೇಕೆದಾಟುವಿನಿಂದ ಬೆಂಗಳೂರುವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಹಾಗೂ ಸಂಗಮಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳುವುದಾಗಿ ಕಾಂಗ್ರೆಸ್ ಹೇಳಿತ್ತು. ಅಧಿವೇಶನದ ಮುನ್ನವೇ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವುದು ಕಾಂಗ್ರೆಸ್ ಉದ್ದೇಶವಾಗಿದೆ. ಆದರೆ ಇದೀಗ ಜನವರಿಯಲ್ಲಿ ಪಾದಯಾತ್ರೆ ನಡೆಸಲು ಉದ್ದೇಶಿಸಿದ್ದು, ಇನ್ನೂ ಅಂತಿಮ ದಿನಾಂಕ ನಿಗದಿಯಾಗಿಲ್ಲ.

ಇದೀಗ ಪಾದಯಾತ್ರೆ ನಡೆಸುವ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಒಟ್ಟು 100 ಕಿ ಮೀ ದೂರದ ಪಾದಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ. ಈ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next