ತುಮಕೂರು/ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತುಮಕೂರಿನಲ್ಲಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದರು.
ರಾಜ್ಯಾದ್ಯಂತ ಜಿಲ್ಲಾ ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ನಡೆಯುತ್ತಿರುವ ತೈಲ ಬೆಲೆ ಏರಿಕೆ ವಿರುದ್ದದ 100 ನಾಟೌಟ್ ಪ್ರತಿಭಟನೆ ಬಗ್ಗೆ ಜೂಮ್ ವಿಡಿಯೋ ಸಂವಾದದ ಮೂಲಕ ಪರಿಶೀಲನೆ ನಡೆಸಿ, ಸಲಹೆ-ಸೂಚನೆಗಳನ್ನು ನೀಡಿದರು.
ಇದನ್ನೂ ಓದಿ:ಗಂಡನ ಬುದ್ಧಿಮಾತಿಗೆ ರೊಚ್ಚಿಗೆದ್ದ ಪತ್ನಿಯಿಂದ ಸುಪಾರಿ ಕೊಟ್ಟು ಹತ್ಯೆಗೆ ಪ್ಲ್ಯಾನ್.!
ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಐದು ದಿನಗಳ ಹೋರಾಟದ ಮೂರನೇ ದಿನವಾದ ಇಂದು ತಿಪಟೂರಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ಆಯೋಜಿಸಿರುವ ಪ್ರತಿಭಟನೆಗೆ ತೆರಳುವ ಮಾರ್ಗದಲ್ಲಿ ಶಿವಕುಮಾರ್ ಅವರು ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.
ಅವರ ನಿವಾಸದಲ್ಲಿ ಉಪಾಹಾರ ಸೇವಿಸಿದರು. ಕುಣಿಗಲ್ ಶಾಸಕ ಡಾ. ರಂಗನಾಥ್, ಮುರಳೀಧರ ಹಾಲಪ್ಪ ಮತ್ತಿತರರು ಜತೆಗಿದ್ದರು.