ಬೆಳಗಾವಿ: ಇತ್ತೀಚೆಗೆ ಉಡುಪಿಯಲ್ಲಿ ಸಾವನ್ನಪ್ಪಿದ ಗುತ್ತಿಗೆದಾರ ಸಂತೋಷ ಪಾಟೀಲ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕುಟುಂಬಸ್ಥರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್, ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ನೋಡಿ ಹೋರಾಟ ನಡೆಸುತ್ತೇವೆ. ಆ ಗ್ರಾಮ ಪಂಚಾಯತ್ ನಲ್ಲಿ ಕೆಲಸ ಮಾಡಿರುವ ಅಧ್ಯಕ್ಷ ನಾಗೇಶ ಮನ್ನೋಳಕರ ಸತ್ಯ ಹೇಳಿದ್ದಾರೆ ಎಂದರು.
ಸಂತೋಷ ಪಾಟೀಲ ಕುಟುಂಬಸ್ಥರಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂ.ಚೆಕ್ ಹಾಗೂ ಮಾಜಿ ಸಚಿವ ಪ್ರಕಾಶ ಹುಕ್ಕೇರಿ 5 ಲಕ್ಷ ರೂ. ಪರಿಹಾರ ವಿತರಿಸಿದರು.
ಇದನ್ನೂ ಓದಿ:PSI ಪರೀಕ್ಷೆ ಅಕ್ರಮ; ಸಿಐಡಿ ಬದಲು ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ
ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ, ಡಾ. ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕೆಪಿಸಿಸಿ ಯುವ ಘಟಕ ಅಧ್ಯಕ್ಷ ಮಹ್ಮದ ನಲಪಾಡ್, ಮಾಜಿ ಶಾಸಕ ಫಿರೋಜ ಸೇಠ, ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರ ಅಧ್ಯಕ್ಷ ರಾಜು ಸೇಠ ಹಲವು ಕಾಂಗ್ರೆಸ್ ಮುಖಂಡರಿದ್ದರು.