Advertisement
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮೇಕೆ ದಾಟು ಪಾದಯಾತ್ರೆ ವೇಳೆ ಕೆಲವರು ಟೋಪಿ ಹಾಕಿದರೆ ಹಾಕಿಸಿಕೊಳ್ಳೋಣ. ಈಗ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡುತ್ತಿದ್ದು, ಅಲ್ಲಿನವರನ್ನು ಆಹ್ವಾನಿಸುತ್ತಿದ್ದೇನೆ. ಎಲ್ಲ ಸಂಘಟನೆಗಳು, ಕಲಾವಿದರು, ಧಾರ್ಮಿಕ ಮುಖಂಡರು ವಿದ್ಯಾರ್ಥಿಗಳು, ಅಪಾರ್ಟ್ ಮೆಂಟ್ ನಿವಾಸಿಗಳು, ಎಲ್ಲ ವರ್ಗದವರನ್ನೂ ಆಹ್ವಾನಿಸುತ್ತಿದ್ದೇನೆ ಎಂದರು.
Related Articles
Advertisement
ವಾಣಿಜ್ಯ ಮಂಡಳಿಗೆ ಭೇಟಿ
ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕರ್ನಾಟಕ ಚಲನ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ, ಅಲ್ಲಿನ ಪದಾಧಿಕಾರಿಗಳು, ಕನ್ನಡ ಚಲನಚಿತ್ರರಂಗದ ಸಮಸ್ತರೂ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಉಪಾಧ್ಯಕ್ಷರಾದ ಗಣೇಶ್, ಬಣಕಾರ್, ನಾಗಣ್ಣ, ಬಾಬ್ಜಿ, ಕಾರ್ಯದರ್ಶಿ ಎಂ.ಎನ್. ಸುರೇಶ್, ಖಜಾಂಚಿ ವೆಂಕಟೇಶ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ, ಸಾ.ರಾ. ಗೋವಿಂದ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಂದರರಾಜ್ ಉಪಸ್ಥಿತರಿದ್ದರು.
ಅಂಕಿ-ಅಂಶಗಳ ಸಮೇತ ಮಾತನಾಡುತ್ತೇನೆ
ನಾನು ಅಧ್ಯಕ್ಷನಾದ ಮೇಲೆ ಮಾತ್ರ ಕಾಂಗ್ರೆಸ್ ಚುನಾವಣೆಗಳನ್ನು ಗೆಲ್ಲುತ್ತಿಲ್ಲ. ಕಾಂಗ್ರೆಸ್ ಪಕ್ಷ ಗೆಲ್ಲುವುದರ ಹಿಂದೆ ರಾಜ್ಯದ ಜನರ ಅಭಿಪ್ರಾಯ ಅಡಗಿದೆ. ಅದರಲ್ಲೂ ನಗರವಾಸಿಗಳು, ಪಟ್ಟಣವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಪರ ವಾಲುತ್ತಿದೆ ಎಂಬುದು ಸ್ಪಷ್ಟವಾಗಿದೆ. ಮತದಾರರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಸಾಮಾನ್ಯವಾಗಿ ಶಾಸಕರಿರುವ ಕಡೆ ಆಡಳಿತ ಪಕ್ಷಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಇರುತ್ತದೆ. ಬಿಜೆಪಿ ಆಡಳಿತ ಪಕ್ಷವಾಗಿದ್ದರೂ, ಬಿಜೆಪಿ ಶಾಸಕರಿದ್ದರೂ ಜನರು ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಂತಿದ್ದಾರೆ. ಇದು ರಾಜ್ಯದ ಜನರ ಭಾವನೆ ಯಾವ ರೀತಿ ಇದೆ ಎಂಬುದಕ್ಕೆ ಸಾಕ್ಷಿ. ಇನ್ನೂ ಫಲಿತಾಂಶ ಬರುವುದು ಬಾಕಿ ಇದೆ. ಪೂರ್ಣ ಫಲಿತಾಂಶ ಬಂದ ನಂತರ ಅಂಕಿ-ಅಂಶಗಳ ಸಮೇತ ಮಾತನಾಡುತ್ತೇನೆ ಎಂದರು.
ಇದು ಮುಂಬರುವ ವಿಧಾನಸಭೆ ಚುನಾವಣೆ ದಿಕ್ಸೂಚಿಯೇ ಎಂಬ ಪ್ರಶ್ನೆಗೆ, ‘ಮಾಧ್ಯಮಗಳೇ ಇದನ್ನು ವಿಮರ್ಶೆ ಮಾಡಲಿ. ಆಡಳಿತ ಪಕ್ಷವಿದ್ದರೂ, ಶಾಸಕರು, ಮಂತ್ರಿಗಳ ಕ್ಷೇತ್ರದಲ್ಲಿ ಏನೇನಾಗಿದೆ, ಜನ ಯಾವ ರೀತಿ ತೀರ್ಪು ನೀಡುತ್ತಿದ್ದಾರೆ ಎಂಬುದನ್ನು ನೋಡಿ. ಜನರ ತೀರ್ಪನ್ನು ನಿರ್ಲಕ್ಷಿಸಿ ಸಬೂಬು ಹೇಳಲು ಬಿಜೆಪಿಗೆ ಸಾಧ್ಯವಿಲ್ಲ. ಜನ ನಮ್ಮ ಮೇಲೆ ವಿಶ್ವಾಸ ಇಡುತ್ತಿದ್ದು, ಅವರ ನಿರೀಕ್ಷೆಯಂತೆ ನಡೆಯಬೇಕಾಗುತ್ತದೆ.
Koo Appರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ ಎಂಬುದು ಈಚಿನ ಚುನಾವಣೆಗಳ ಫಲಿತಾಂಶವೇ ಸಾಕ್ಷಿ. ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಇದಕ್ಕೆ ಪೂರಕ ಎನ್ನುವಂತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದರಲ್ಲಿ ಸಂಶಯವಿಲ್ಲ. ಅಪಾರ ಜನಪರ ಬೆಂಬಲ ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ರಾಜ್ಯದ ಮತದಾರರಿಗೆ ಧನ್ಯವಾದಗಳು. 1/2 – D K Shivakumar (@dkshivakumar_official) 30 Dec 2021