ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು 9 ವರ್ಷಗಳ ಹಿಂದೆ ಲೋಕಸಭೆಗೆ ಆಯ್ಕೆಯಾಗಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸುವ ಮುನ್ನ ಬಾಗಿಲುಗಳಿಗೆ ನಮಸ್ಕರಿಸಿದಂತೆ ಶನಿವಾರ ಉಪ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧ ಪ್ರವೇಶಿಸುವ ಮುನ್ನ ಬಾಗಿಲುಗಳಿಗೆ ನಮಸ್ಕರಿಸಿದರು.
ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ವಿಧಾನಸೌಧಕ್ಕೆ ಆಗಮಿಸಿ ದರು. ವಿಧಾನಸೌಧ ಆವರಣ ಪ್ರವೇಶಿಸಿ ಸಂಪುಟ ಸಭೆಗೆ ತೆರಳುವ ಮುನ್ನ ವಿಧಾನಸೌಧದ ಮೆಟ್ಟಿಲುಗಳಿಗೆ ಶಿರಭಾಗಿ ಸಾಷ್ಟಾಂಗ ನಮಸ್ಕರಿಸಿದರು. ಬಳಿಕ ವಿಧಾನಸೌಧದ ಒಳಗೆ ಪ್ರವೇಶಿಸಿದರು.
Advertisement