Advertisement
ಅವರು ಜಿಲ್ಲಾಡಾಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆನೇಕಲ್, ಬೆಂಗಳೂರು ನಗರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಇಂದು 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಆನೇಕಲ್ ತಾಲ್ಲೂಕಿನ ಸರ್ಜಾಪುರಾದ ಡಾ.ಬಿ.ಆರ್ ಅಂಬೇಡ್ಕರ್ ಮೈದಾನ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಆರೋಗ್ಯ ಮೇಳವು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಇದು ದಿನನಿತ್ಯದ ಕಾರ್ಯಕ್ರಮವಾಗಬೇಕು. ಸರ್ಕಾರವು ಆಯೋಜಿಸಿರುವ ಈ ಶಿಬಿರಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅನೇಕಲ್ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶಿವಣ್ಣರವರು ತಿಳಿಸಿದರು.
ವಿಧಾನ ಸಭಾ ಪರಿಷತ್ ಸದಸ್ಯರಾದ ಹೆಚ್ .ಎಸ್ . ಗೋಪಿನಾಥ್ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣ , ಪರಿಸರ , ಆರೋಗ್ಯ ಅತ್ಯವಶ್ಯಕವಾಗಿದ್ದು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವಂತ ಕಾರ್ಯಕ್ರಮ ಇದಾಗಿದೆ. ನಾವು ನಮ್ಮ ಜೀವನದ ದಿನನಿತ್ಯದ ಚಟುವಟಿಕೆಗಳು ಹಾಗೂ ಆಹಾರವನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದು ಮುಖ್ಯ. ಕೇವಲ ಕಾರ್ಯಕ್ರಮಕ್ಕೋಸ್ಕರ ಆಗಬಾರದು ಕಾರ್ಯಕ್ರಮದ ಮೂಲ ಉದ್ದೇಶ ಈಡೇರಿಕೆ ಮಾಡುವುದರ ಕಡೆ ಗಮನ ಕೊಡಬೇಕು ಎಂದರು.ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಯುಷಮಾನ ಕಾರ್ಡ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸರ್ಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಇಲಾಖೆಯ ಮುಖ್ಯ ನಿರ್ವಾಹಕರಾದ ವಿನುತ ರಾಣಿ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.