Advertisement

ಆರ್.ಆರ್. ನಗರ: ಮಾಗಡಿ ಬಾಲಕೃಷ್ಣ, ರಕ್ಷಾ ರಾಮಯ್ಯ, ಕೃಷ್ಣಪ್ಪ ಹೆಸರು ಪ್ರಸ್ತಾಪ: DK ಸುರೇಶ್

03:54 PM Oct 01, 2020 | keerthan |

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಸಂಬಂಧ ಕ್ಷೇತ್ರದ ಸ್ಥಳೀಯ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ತಿಳಿಸಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇವೆ ಎಂದಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.

Advertisement

ಸಭೆಯ ಬಳಿಕ ಮಾತನಾಡಿದ ಅವರು ಕ್ಷೇತ್ರದ ಮುಖಂಡರು ಸಮರ್ಥ ಅಭ್ಯರ್ಥಿ ಕೊಡಿ ಎಂದು ಕೇಳಿದ್ದಾರೆ. ಮಾಗಡಿ ಬಾಲಕೃಷ್ಣ, ರಕ್ಷಾ ರಾಮಯ್ಯ, ಕೃಷ್ಣಪ್ಪ ಸೇರಿ ಹಲವರು ಹೆಸರು ಕೇಳಿ ಬಂದಿದೆ. ಎಲ್ಲರನ್ನು ಒಟ್ಟುಗೂಡಿಸಿಕೊಂಡು ಹೋಗುವವರನ್ನು ಆಯ್ಕೆ ಮಾಡುತ್ತೇವೆ ಎಂದರು.

ನಮ್ಮ ಕಾರ್ಯಕರ್ತರು ಪ್ರತಿ ‌ಬೂತ್ ನಲ್ಲಿದ್ದಾರೆ. ಕೆಲವು ಸಮಸ್ಯೆ, ಬೆದರಿಕೆ ಬಗ್ಗೆ ನನ್ನ‌ಗಮಕ್ಕೆ ತಂದಿದ್ದಾರೆ. ಆಸೆ, ಅಮಿಷಗಳ ಬಗ್ಗೆ ನನ್ನ‌ಗಮನಕ್ಕೆ ತಂದಿದ್ದಾರೆ. ನಮ್ಮ ಕಾರ್ಯಕರ್ತರು ಎಲ್ಲವನ್ನೂ ತಿಳಿಸಿದ್ದಾರೆ ಎಂದರು.

ಇದನ್ನೂ ಓದಿ:ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸರ್ಪ್ರೈಸ್ ಅಭ್ಯರ್ಥಿ? ಮಲ್ಲಿಕಾರ್ಜುನ ಖರ್ಗೆ ಸುಳಿವು

ನಾನು ಎಲ್ಲಿಯೂ  ಸ್ಪರ್ಧೆ ಮಾಡುವುದಿಲ್ಲ. ಚುನಾವಣಾ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇನೆ ಎಂದ ಅವರು ಮುನಿರತ್ನಂ ನನ್ನ ಸಂಪರ್ಕಕಕ್ಕೆ ಬಂದಿಲ್ಲ. ಬಿಜೆಪಿಯಲ್ಲಿ ಟಿಕೆಟ್ ಸಿಗದೆ ಕಾಂಗ್ರೆಸ್ ಗೆ ಬಂದರೆ ಎಂಬ ಪ್ರಶ್ನೆಗೆ ಉತ್ತರಿಸಿ,  ಅವರನ್ನು ಸೇರಿಸಿಕೊಳ್ಳುವ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. ಕ್ಷೇತ್ರದ ಮತದಾರರು ನಿರ್ಧಾರ ಮಾಡ್ತಾರೆ ಎಂದರು.

Advertisement

ಮುನಿರತ್ನಂ ನನಗೆ ಒಳ್ಳೆಯ ಸ್ನೇಹಿತ. ರಾಜಕೀಯವಾಗಿ ಮಾತ್ರ ನನಗೆ ಶತ್ರು. ಸ್ನೇಹಿತ ಅಲ್ಲ ಅಂತ ಹೇಳಲು ಆಗುತ್ತಾ? ಅವರು ನನ್ನ ಉತ್ತಮ ಸ್ನೇಹಿತ, ಆಗಲೂ ಈಗಲೂ‌ ಅಷ್ಟೇ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next