Advertisement
ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು, ಅಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಪಕ್ಷದ ಹೈಕಮಾಂಡ್ ಗೆ ಸೇರಿದ್ದರು. ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ.
Related Articles
Advertisement
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಶಾಸಕರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಉತ್ತರಿಸಿದ ಸುರೇಶ್ ಅವರು, ‘ಚುನಾವಣೆ ನೇತೃತ್ವದ ಬಗ್ಗೆ ಚರ್ಚೆ ಮಾಡಲು ಸಮಯ ಬಹಳ ದೂರವಿದೆ. ಈಗ ಕರೋನಾ ಇದ್ದು, ಅದನ್ನು ನಿಭಾಯಿಸಲು ಏನು ಮಾಡಬೇಕು ಎಂಬುದನ್ನು ಅವರು ಹೇಳಬೇಕು ಎಂದು ತಿಳಿಸಿದ್ದಾರೆ.
ಇನ್ನು, ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿದರು ಎಂಬಂತೆ, ವಿರೋಧ ಪಕ್ಷದವರು ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡುತ್ತಿರಲು ಕಾರಣ ಏನು? ಇದು ಗೊಂದಲ ಸೃಷ್ಟಿಸುವುದಿಲ್ಲವೇ ಎಂಬ ಪ್ರಶ್ನೆಗೆ, ಪ್ರತಿಕ್ರಿಯಿಸಿದ ಅವರು, ‘ಮಲಗಿದ್ದವರೆಲ್ಲ ಈಗ ಎದ್ದಿದ್ದಾರೆ, ಹೀಗಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದು, ವಿರೋಧ ಪಕ್ಷದ ಶಾಸಕರಂತೆ ಕೆಲಸ ಮಾಡಬೇಕಿದೆ. ಅವರ ಹೇಳಿಕೆಗಳು ಬರೀ ಕಾರ್ಯಕರ್ತರಲ್ಲಿ ಮಾತ್ರವಲ್ಲ, ಎಲ್ಲರಲ್ಲೂ ಗೊಂದಲ ಉಂಟು ಮಾಡುತ್ತದೆ. ಕೆಲವರು ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಮನಸ್ಥಿತಿ ಉಳ್ಳವರು. ನಿಜವಾದ ಕಾಂಗ್ರೆಸ್ ನಾಯಕರಾರೂ ಈ ರೀತಿ ಮಾತನಾಡುವುದಿಲ್ಲ, ಅನಗತ್ಯ ಭಾವನೆ ವ್ಯಕ್ತಪಡಿಸುವುದಿಲ್ಲ. ಅವರು ಕಾಂಗ್ರೆಸ್ ಶಿಸ್ತನ್ನು ಕಲಿತಿರುತ್ತಾರೆ. ಅಧಿಕಾರಕ್ಕಾಗಿಯೇ ಕಾಂಗ್ರೆಸ್ ಗೆ ಬಂದವರನ್ನು, ಅದಕ್ಕೆ ಜೋತು ಬಿದ್ದವರನ್ನು ಯಾರು, ಏನೂ ಮಾಡಲು ಸಾಧ್ಯವಿಲ್ಲ’ ಎಂದು ಉತ್ತರಿಸಿದರು.
ಅಶಿಸ್ತು ತೋರಿದವರಿಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ‘ಶಿಸ್ತು, ಅಶಿಸ್ತಿನ ವಿಚಾರವನ್ನು ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತದೆ. ಯಾರು ಅಧಿಕಾರಕ್ಕೆ ಅಂಟಿಕೊಂಡಿದ್ದಾರೋ ಅವರು ಅಶಿಸ್ತನ್ನು ಅಭ್ಯಾಸ ಮಾಡಿಕೊಂಡಿದ್ದು, ನಿಜವಾದ ಕಾಂಗ್ರೆಸಿಗರು ಕಾಂಗ್ರೆಸ್ ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿದ್ದಾರೆ’ ಎಂದರು.
ಶಾಸಕಾಂಗ ಪಕ್ಷದ ನಾಯಕರು ಇದನ್ನು ನಿಯಂತ್ರಿಸಬೇಹುದಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್ ಅವರು, ‘ನಾನು ಆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರು, ಪಕ್ಷದ ರಾಜ್ಯ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ನೇಮಕವಾಗಿದ್ದಾರೆ. ಅವರಿಬ್ಬರೂ ಅವರವರ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯದಲ್ಲಿರುವವರಿಗೆ ಏನು ಕೆಲಸ? ಅವರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕಾದ ಜವಾಬ್ದಾರಿ ಇದೆ. ಕರೋನಾ ಸಮಯದಲ್ಲಿ ಆಡಳಿತ ಪಕ್ಷದ ವೈಫಲ್ಯ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಎಂ ಹುದ್ದೆ ಸೇರಿ ಸದ್ಯಕ್ಕೆ ಯಾವುದೇ ಸ್ಥಾನ ಖಾಲಿ ಇಲ್ಲ. ಖಾಲಿ ಆದಾಗ ಯಾರ್ಯಾರು ಚರ್ಚೆಗೆ ಬರುತ್ತಾರೋ ಅವರಿಗೆಲ್ಲ ಆಗ ಸವಾಲು ಮಾಡೋಣ’ ಎಂದರು.
ಇದನ್ನೂ ಓದಿ : ಪ್ರಧಾನ್ ಮಂತ್ರಿ ಜನ ಧನ್ ಖಾತೆ ಹೇಗೆ ತೆರೆಯುವುದೆಂದು ನಿಮಗೆ ಗೊತ್ತೇ..? ಇಲ್ಲಿದೆ ಮಾಹಿತಿ