Advertisement

D.K.- ಉಡುಪಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ

11:46 PM Jan 26, 2024 | Team Udayavani |

ಮಂಗಳೂರು: ಜಿಲ್ಲೆಯ ವೆನ್ಲಾಕ್‌ ಆಸ್ಪತ್ರೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಆಸ್ಪತ್ರೆ ಗಳಿಗೆ 53 ಹೊಸ ಡಯಾಲಿಸಿಸ್‌ ಯಂತ್ರಗಳನ್ನು ಒದಗಿಸಿದ್ದು, ಕಡಬ, ಮೂಲ್ಕಿ, ಮೂಡುಬಿದಿರೆ ಆಸ್ಪತ್ರೆಗಳಿಗೆ ಯಂತ್ರಗಳನ್ನು ಫೆಬ್ರವರಿಯಲ್ಲಿ ನೀಡು ವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

Advertisement

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನೆಹರೂ ಮೈದಾನದಲ್ಲಿ ಶುಕ್ರವಾರ ಧ್ವಜಾರೋಹಣಗೈದು ಮಾತನಾಡಿದ ಅವರು, ಎಂಡೋಸಂತ್ರಸ್ತರಿಗೆ ಪಾಲ ನಾ ಕೇಂದ್ರಗಳನ್ನು ಉಜಿರೆ, ಕೊಕ್ಕಡ ಹಾಗೂ ಕೊಯಿಲದಲ್ಲಿ ತೆರೆದಿದ್ದು, ಉಜಿರೆಯಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ವನ್ನು ತೆರೆಯಲಾಗಿದೆ. ಹೊಸದಾಗಿ ಪಾಣಾಜೆ, ಕಣಿಯೂರು, ವಿಟ್ಲ ಮತ್ತು ಬೆಳ್ಳಾರೆಯಲಿಯೂ ಪಾಲನಾ ಕೇಂದ್ರ ತೆರೆಯಲಾಗುತ್ತಿದೆ ಎಂದರು.

ರಾಮರಾಜ್ಯ ಪರಿಕಲ್ಪನೆ
ರಾಮ ರಾಜ್ಯದ ನೈಜ ಪರಿಕಲ್ಪ ನೆಯೇ ಜನಾನುರಾಗಿ ಆಡಳಿತ. ನಾವು ಅಧಿಕಾರಕ್ಕೆ ಬಂದ ಏಳೇ ತಿಂಗಳುಗಳಲ್ಲಿ ಐದು ಭರವಸೆಗಳನ್ನು ಈಡೇರಿಸಿ ನಿಜವಾದ ರಾಮರಾಜ್ಯದ ಆಡಳಿತ ನೀಡುತ್ತಿದ್ದೇವೆ ಎಂದರು.

ಆಯುಷ್ಮಾನ್‌ ಭಾರತ್‌ ಸುವರ್ಣ ಕರ್ನಾಟಕ ಯೋಜನೆಯಲ್ಲಿ ಅತ್ಯು ತ್ತಮ ಸಾಧನೆ ಮಾಡಿದ ಜಿಲ್ಲೆಯ ಕೆಎಂಸಿ ಅತ್ತಾವರ, ಎಂಐಒ ಮಂಗಳೂರು ಹಾಗೂ ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸುಬ್ರಹ್ಮಣ್ಯದ ಪ್ರಾ. ಆರೋಗ್ಯ ಕೇಂದ್ರಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ಡಿ. ವೇದವ್ಯಾಸ ಕಾಮತ್‌, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ವಿಧಾನ ಪರಿಷತ್‌ ಸದಸ್ಯರಾದ ಕೆ. ಹರೀಶ್‌ ಕುಮಾರ್‌, ಮಂಜುನಾಥ್‌ ಭಂಡಾರಿ, ಪಶ್ಚಿಮ ವಲಯ ಪೊಲೀಸ್‌ ಮಹಾ ನಿರೀಕ್ಷಕ ಅಮಿತ್‌ ಸಿಂಗ್‌, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ದ.ಕ. ಜಿ.ಪಂ. ಸಿಇಒ ಡಾ|ಆನಂದ್‌ ಕೆ, ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಎಸ್ಪಿ ಸಿ.ಬಿ.ರಿಷ್ಯಂತ್‌, ಮನಪಾ ಆಯುಕ್ತ ಆನಂದ್‌ ಸಿ.ಎಲ್‌ ಮತ್ತಿತರರು ಉಪಸ್ಥಿತರಿದ್ದರು. ಉಮೇಶ್‌ ಕೆ.ಆರ್‌. ಹಾಗೂ ಮಂಜುಳಾ ಶೆಟ್ಟಿ ನಿರೂಪಿಸಿದರು.

Advertisement

ಕುಡಿಯುವ ನೀರು
ಜಿಲ್ಲೆಯ ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ 24 ಗ್ರಾಮಗಳಿಗೆ ಕುಡಿ ಯುವ ನೀರು ಪೂರೈಸಲು ಕೈರಂಗಳ ನೀರು ಶುದ್ಧೀಕರಣ ಘಟಕದಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ 245 ಕೋಟಿ ರೂ. ಹಣವನ್ನು ಬಳಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸಚಿವರು ತಿಳಿಸಿದರು.

ಗ್ಯಾರಂಟಿಗೆ ಉತ್ತಮ ಸ್ಪಂದನೆ
ರಾಜ್ಯ ಸರಕಾರದ ಗ್ಯಾರಂಟಿಗಳಿಗೆ ಉತ್ತಮ ಸ್ಪಂದನೆ ಸಿಕ್ಕಿದೆ. ದಕ್ಷಿಣ ಕನ್ನಡ ಪಡಿತರ ಗ್ರಾಹಕರಿಗೆ ಜುಲೈನಿಂದ ಡಿಸೆಂಬರ್‌ವರೆಗೂ 321 ಕೋ.ರೂ ಗಳನ್ನು ನೇರವಾಗಿ ವರ್ಗಾಯಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ3.49 ಲಕ್ಷ ಫಲಾನುಭವಿಗಳಿಗೆ ಖಾತೆಗೆ ತಲಾ 2 ಸಾವಿರ ರೂ. ವರ್ಗಾವಣೆಯಾಗಿದೆ. ಗೃಹಜ್ಯೋತಿ ಯೋಜನೆಯಡಿ 39.28 ಲಕ್ಷ ಮಂದಿ ಪ್ರಯೋಜನ ಪಡೆದಿದ್ದು, ಇದರ ಸಬ್ಸಿಡಿ ಮೊತ್ತ 183 ಕೋ.ರೂ.ಗಳನ್ನು ಸರಕಾರವು ಮೆಸ್ಕಾಂಗೆ ಪಾವತಿಸಿದೆ. ಶಕ್ತಿ ಯೋಜನೆಗೂ ಅದ್ಭುತ ಸ್ಪಂದನೆ ಸಿಕ್ಕಿದ್ದು, ಮಂಗಳೂರಿಗೆ ಹೆಚ್ಚುವರಿ ಬಸ್‌ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು ಸಚಿವರು.

ಬರ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ಧ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
ಉಡುಪಿ: ರಾಜ್ಯದಾದ್ಯಂತ ತೀವ್ರ ಮಳೆಯ ಕೊರತೆಯಿಂದಾಗಿ ಬರಗಾಲದ ಛಾಯೆ ಆವರಿಸಿದೆ. ರಾಜ್ಯದ 223 ತಾಲೂಕುಗಳನ್ನು ಬರಪೀ ಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದ್ದು, ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕುಗಳನ್ನೂ ಸೇರಿಸಲಾಗಿದೆ. ಬರ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ಧ ವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಕೊರತೆ ಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.


ಅಜ್ಜರಕಾಡು ನಡೆದ ಗಣರಾಜ್ಯೋತ್ಸವದಲ್ಲಿ ಶುಕ್ರವಾರ ಧ್ವಜಾರೋಹಣ ಗೈದು ಅವರು ಸಂದೇಶ ನೀಡಿದರು.ಬರ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ 13,937 ಹೆಕ್ಟೇರ್‌ನಷ್ಟು ಭತ್ತದ ಬೆಳೆ ಹಾನಿ ಅಂದಾಜಿಸಿದ್ದು, 11.85 ಕೋ.ರೂ. ಅನುದಾನ ಕೋರಲಾಗಿದೆ. ಮೊದಲನೇ ಕಂತಿನಲ್ಲಿ 19,071 ರೈತರಿಗೆ 2.64ಕೋ.ರೂ. ಪರಿಹಾರ ನೀಡಲಾಗಿದೆ. ಜಿಲ್ಲಾ ಮಟ್ಟದ ಜನತ ದರ್ಶನಕ್ಕೆ ಈವರೆಗೆೆ 403 ಅರ್ಜಿಗಳು ಬಂದಿವೆ ಎಂದು ತಿಳಿಸಿದರು.

ಹತ್ತು ಕೋ.ರೂ. ಮಂಜೂರು:
ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯ ಹಾಗೂ ವಸತಿ ಶಾಲೆಗಳಿಗೆ 6,036 ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಬಾಕೂìರು ಹಾಗೂ ಕುಂದಾಪುರದಲ್ಲಿ ಹೊಸದಾಗಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ತಲಾ 5 ಕೋ.ರೂ.ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಅಗತ್ಯ ಮೂಲಸೌಕರ್ಯ
ಹೆಬ್ರಿ ತಾಲೂಕು ಕೆರೆಬೆಟ್ಟು, ಶಿವಪುರ ಗ್ರಾಮದಲ್ಲಿ 114 ಎಕ್ರೆ ಹಾಗೂ ಕಾರ್ಕಳದ ನಿಟ್ಟೆಯಲ್ಲಿ 51 ಎಕ್ರೆ ಜಮೀನಿನಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಕಾಪು ತಾಲೂಕಿನ ಎಲ್ಲೂರು ಹಾಗೂ ಸಾಂತೂರು ಗ್ರಾಮ ದಲ್ಲಿ 942 ಎಕ್ರೆ ಸ್ಥಳ ಪರಿಶೀಲನೆ ಮಾಡಿ, ಪ್ರಾಥಮಿಕ ಅಧಿಸೂಚನೆ ಹೊರಡಿಸ ಲಾಗಿದೆ ಎಂದು ಹೇಳಿದರು.

ಶಾಸಕ ಯಶ್‌ಪಾಲ್‌ ಎ. ಸುವರ್ಣ, ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ., ಜಿ.ಪಂ.ಸಿಇಓ ಪ್ರತೀಕ್‌ ಬಯಾಲ್‌, ಅಪರ ಜಿಲ್ಲಾಧಿಕಾರಿ ಮಮತಾದೇವಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌ಟಿ ಸಿದ್ಧಲಿಂಗಪ್ಪ ಉಪಸ್ಥಿತರಿದ್ದರು.

ನಗರಸಭಾ ವ್ಯಾಪ್ತಿಯಲ್ಲಿ ಒಳಚರಂ ಡಿ ವ್ಯವಸ್ಥೆ ನಿರ್ಮಾಣ ಮತ್ತು ಉನ್ನತೀ ಕರಣ, ಒಳಚರಂಡಿ ತ್ಯಾಜ್ಯ ಸಂಸ್ಕರಣ ಘಟಕಗಳ ದುರಸ್ತಿ ಸೇರಿದಂತೆ 30 ಕೋ.ರೂ. ಅನುದಾನ ಬಿಡುಗಡೆಯಾಗಿದೆ. ವಕೀಲರ ಭವನ ಹಾಗೂ ಎ.ಡಿ.ಆರ್‌. ಸಂಕೀರ್ಣವನ್ನು ಒಳಗೊಂಡ ಅನೆಕ್ಸ್‌ ನ್ಯಾಯಾಲಯ ನಿರ್ಮಾಣಕ್ಕೆ 15.14 ಕೋ.ರೂ.ಗಳಿಗೆ ಅನುಮೋದಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಗ್ಯಾರಂಟಿ ಸಾಧನೆ
ಗೃಹಲಕ್ಷ್ಮಿ ಯೋಜನೆಗೆ 2.16 ಲಕ್ಷ ಮಂದಿ ನೋಂದಣಿಯಾಗಿದ್ದು, 2 .02 ಲಕ್ಷ ಮಂದಿಯ ಖಾತೆಗೆ ಹಣ ವರ್ಗಾಯಿಸಲಾಗಿದೆ. ಶಕ್ತಿ ಯೋಜನೆಯಡಿ 71.32 ಲಕ್ಷ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಗೃಹಜ್ಯೋತಿಯಡಿ 3 .12 ಲಕ್ಷ ಮಂದಿ ನೋಂದಾಯಿಸಿದ್ದು, ಸೌಲಭ್ಯ ಒದಗಿಸಲಾಗಿದೆ. ಪ್ರತಿಯೊಬ್ಬರಿಗೂ 5 ಕೆ.ಜಿ. ಆಹಾರ ಧಾನ್ಯದ ಬದಲಾಗಿ ಈವರೆಗೆ 73 ಕೋ.ರೂ.ಪಾವತಿಸಲಾಗಿದೆ. ಯುವನಿಧಿಗೆ 1,781 ಜನ ಅರ್ಹರು ನೋಂದಾ ಯಿಸಿದ್ದು. ಇವರ ಖಾತೆಗೆ ಹಣ ವರ್ಗಾಯಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next