Advertisement

ದ.ಕ, ಉಡುಪಿ, ಕೊಡಗು ಸಹಿತ ಇತರ ಜಿಲ್ಲೆಗಳ ಇ-ಸ್ವತ್ತು ಸಮಸ್ಯೆ ಶೀಘ್ರ ಪರಿಹಾರ: ಪ್ರಿಯಾಂಕ್‌

11:03 PM Feb 14, 2024 | Team Udayavani |

ಬೆಂಗಳೂರು: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇ-ಸ್ವತ್ತು ಸಮಸ್ಯೆ ಇರುವುದು ಸರಕಾರದ ಗಮನಕ್ಕಿದ್ದು, ಸದ್ಯದಲ್ಲೇ ಆ ಸಮಸ್ಯೆ ಬಗೆಹರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

Advertisement

ಚಿಕ್ಕಮಗಳೂರು ಶಾಸಕ ಎಚ್‌.ಡಿ. ತಮ್ಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸಚಿವರ ಜತೆಗೂಡಿ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11 ಎಯನ್ನು ಪಡೆಯಲು ಆಸ್ತಿಯ ಮಾಲಕರು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದಲ್ಲಿ ಪಿಡಿಒ ಅವರು ಡಿಜಿಟಲ್‌ ಸಹಿಯ ಮೂಲಕ ನಮೂನೆ-09 ಮತ್ತು 11 ಎ ವಿತರಿಸುತ್ತಾರೆ. ಕ್ರಮಬದ್ಧವಲ್ಲದ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ನಮೂನೆ 11ಬಿಯನ್ನು ಪಡೆಯಲು ಆಸ್ತಿಯ ಮಾಲಕರು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದಲ್ಲಿ ಪಿಡಿಒ ಅವರು ಡಿಜಿಟಲ್‌ ಸಹಿಯ ಮೂಲಕ ನಮೂನೆ 11ಬಿ ವಿತರಿಸುತ್ತಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ವಿತರಿಸುವುದಕ್ಕೆ ವಿನಾಯಿತಿ ನೀಡಿ ನಮೂನೆ 11ಬಿಯನ್ನು ಕೈಬರಹದ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next