ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ
https://dksandbazar.comತಂತ್ರಾಂಶವನ್ನು ಮರು ಸ್ಥಾಪಿಸಲಾಗಿದೆ.
ಸಾರ್ವಜನಿಕರು ಈ ಆ್ಯಪ್ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಮರಳಿನ ಕೊರತೆ ಎದುರಾಗಿದ್ದು, ಇ-ಸ್ಯಾಂಡ್‌ನಲ್ಲಿ ಮರಳು ಲಭ್ಯವಾಗುತ್ತಿಲ್ಲ. ಕೆಲದಿನಗಳ ಹಿಂದೆ ಕುಂದಾಪುರ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಲಭ್ಯವಿದ್ದ ಮರಳು ಬೇಡಿಕೆ ಹೆಚ್ಚಿದಂತೆ ಕಾದಿರಿಸಿದವರಿಗೆ ಮರಳು ಪೂರೈಕೆಯಾಗುತ್ತಿದ್ದು, ಇ-ಸ್ಯಾಂಡ್ ವೆಬ್‌ಸೈಟ್‌ನಲ್ಲಿ ಸದ್ಯಕ್ಕೆ ಆನ್ ಲೈನ್ ಬುಕ್ಕಿಂಗ್‌ಗೆ ತೆರೆದುಕೊಳ್ಳುತ್ತಿಲ್ಲ. ಮತ್ತೆ ಮರಳು ಲಭ್ಯವಾದಲ್ಲಿ ಬುಕ್ಕಿಂಗ್ ಆಪ್ಶನ್ ತೆರೆದುಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಕಂಡುಬಂದರೆ ದೂರು ನೀಡಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಗಾರಿಕೆಗೆ ಕಡಿವಾಣಕ್ಕೆ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅನಧಿಕೃತ ಮರಳುಗಾರಿಕೆ ಕಂಡುಬಂದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932ಗೆ ತಿಳಿಸುವಂತೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.