Advertisement

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

11:00 AM Dec 19, 2024 | Team Udayavani |

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್‌ ಅಧಿಕಾರಿ ಡಿ.ರೂಪಾ ನಡುವಿನ ತಿಕ್ಕಾಟ ಮತ್ತೆ ಮುನ್ನಲೆಗೆ ಬಂದಿದ್ದು, ಡಿ.ರೂಪಾ ಮೌದ್ಗಿಲ್‌ ಅವರು ರೋಹಿಣಿ ಸಿಂಧೂರಿ ವಿರುದ್ಧ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

Advertisement

2023ರ ಫೆ.19ರಂದು ರೋಹಿಣಿ ಸಿಂಧೂರಿ ಅವರು ಮಾಧ್ಯಮ ಹೇಳಿಕೆಯೊಂದನ್ನು ನೀಡಿದ್ದರು. ನಂತರ ಅದನ್ನು ಎಕ್ಸ್‌ ಜಾಲತಾಣದಲ್ಲಿ ಹಂಚಿದ್ದರು. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ಈ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆ ಆಗಿದೆ. ರೋಹಿಣಿ ಸಿಂಧೂರಿ ಹೇಳಿಕೆಯಿಂದ, ತಮ್ಮ ಕುಟುಂಬಸ್ಥರಿಗೆ ಮಾನಸಿಕವಾಗಿ ಕಿರಿಕಿರಿಯಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸುವಂತೆ ರೂಪಾ ಅರ್ಜಿ ಸಲ್ಲಿಸಿದ್ದಾರೆ. ಡಿ. ರೂಪಾ ಮೌದ್ಗಿಲ್‌ ಅವರ ಅರ್ಜಿಯನ್ನು ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್‌ ಕೈಗೆತ್ತಿಕೊಂಡು ರೋಹಿಣಿ ಸಿಂಧೂರಿ ಅವರಿಗೆ ನೋಟಿಸ್‌ ನೀಡಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next