ಮಹಾನಗರ: ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ಭೇಟಿಯಾಗಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿತು.
ವೇದವ್ಯಾಸ ಕಾಮತ್ ಮಾತನಾಡಿ, ಮಹಾನಗರ ಪಾಲಿಕೆಯಲ್ಲಿ ಉದ್ಯಮಿಗಳಿಗೆ ನೀಡಲಾಗುವ ಟ್ರೇಡ್ ಲೈಸೆನ್ಸ್ ಮತ್ತು ಅದರ ನವೀಕರಣದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ವಿವರಿಸಿದರು.
ಮರಳು ಪೂರೈಕೆಯಲ್ಲಿ ಆಗುತ್ತಿರುವ ನಿರಂತರ ಸಮಸ್ಯೆಯಿಂದ ಮಧ್ಯಮ ವರ್ಗದ ಜನ ಮನೆ ಕಟ್ಟಲಾಗದೇ, ರಿಪೇರಿ ಮಾಡಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರಾಪರ್ಟಿ ಕಾರ್ಡ್ ಮಾಡಿಸಲು ಹೋಗುವ ಜನರಿಗೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಅವರು ತೊಂದರೆ ಅನುಭವಿಸುತ್ತಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯ ಸಮಸ್ಯೆ, ಅದನ್ನು ವಹಿಸಿಕೊಂಡಿರುವ ಗುತ್ತಿಗೆದಾರರ ನಿರ್ಲಕ್ಷದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಒಳಚರಂಡಿ ಸಮಸ್ಯೆಗಳಿಂದ ಮಳೆಗಾಲದಲ್ಲಿ ಕೃತಕ ನೆರೆಯಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಯವರಿಗೆ ತಿಳಿಸಿದರು.
ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಸಂಜಯ್ ಪ್ರಭು, ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ರೂಪಾ ಡಿ. ಬಂಗೇರ, ವಸಂತ್ ಜೆ. ಪೂಜಾರಿ, ಶ್ರೀನಿವಾಸ್ ಶೇಟ್, ಜಯಂತಿ ಆಚಾರ್, ರಾಜೇಂದ್ರ ಕುಮಾರ್, ಪೂರ್ಣಿಮಾ, ಮುತಾಲಿಬ್ ಉಪಸ್ಥಿತರಿದ್ದರು .