ಹೊಸದಿಲ್ಲಿ: ರಾಜ್ಯಸಭಾ ಸದಸ್ಯರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಡಾ. ವೀರೇಂದ್ರ ಹೆಗ್ಗಡೆ ಅವರು ಕನ್ನಡದಲ್ಲೇ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಜು.6ರಂದು ಡಾ.ಡಿ.ವೀರೆಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಕಥೆಗಾರ ವಿಜಯೇಂದ್ರ ಪ್ರಸಾದ್, ಅಥ್ಲೀಟ್ ಪಿ.ಟಿ.ಉಷಾ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು.
ಇದನ್ನೂ ಓದಿ:600 ಕೋಟಿ ರೂ. ಆಸ್ತಿಯನ್ನು ಉ.ಪ್ರದೇಶ ಸರ್ಕಾರಕ್ಕೆ ದಾನ ಮಾಡಿದ ವೈದ್ಯ!
ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹಾರ್ದಿಕ ಅಭಿನಂದನೆಗಳು. ತಮ್ಮ ಜನಸೇವೆ ಸರಾಗವಾಗಿ ಸಾಗಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಶುಭ ಹಾರೈಸಿದರು.