Advertisement

ರಸ್ತೆ-ಫುಟ್‌ಪಾತ್‌ ಅತಿಕ್ರಮಿಸಿದ್ದ ಡಬ್ಬಾ ಅಂಗಡಿ-ಶೆಡ್‌ ತೆರವು

10:07 AM Oct 16, 2019 | Suhan S |

ಹುಬ್ಬಳ್ಳಿ: ರಸ್ತೆ ಹಾಗೂ ಪಾದಚಾರಿ ಮಾರ್ಗ ಅತಿಕ್ರಮಣ ತೆರವಿಗೆ ಮಹಾನಗರ ಪಾಲಿಕೆ ಮುಂದಾಗಿದ್ದು, 8ನೇ ವಲಯ ಕಚೇರಿ ವ್ಯಾಪ್ತಿಯ ಪ್ರದೇಶಗಳಲ್ಲಿ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.

Advertisement

ವಲಯ ವ್ಯಾಪ್ತಿಯ ಚಿಟಗುಪ್ಪಿ ಆಸ್ಪತ್ರೆ ಮುಂಭಾಗದಲ್ಲಿ ಎರಡು ಡಬ್ಟಾ ಅಂಗಡಿ, ಮಂಟೂರ ರಸ್ತೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ 15 ಶೆಡ್‌ ಹಾಗೂ 8 ಡಬ್ಟಾ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ರಸ್ತೆ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿದ್ದರೆ ತೆರವು ಮಾಡುವುದಾಗಿ ಪಾಲಿಕೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಕುರಿತು ಗಂಭೀರವಾಗಿ ತೆಗೆದುಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಆದೇಶದ ಮೇರೆಗೆ ವಲಯವಾರು ಸಮೀಕ್ಷೆ ಮಾಡಿ ಒತ್ತುವರಿಯನ್ನು ಗುರುತಿಸಲಾಗಿತ್ತು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿದ ಭರವಸೆಯ ಮೇರೆಗೆ ಪಾಲಿಕೆ ಆಯುಕ್ತರು ಒತ್ತುವರಿ ತೆರವಿಗೆ ಮುಂದಾಗಿದ್ದಾರೆ.

ವಲಯ ಸಹಾಯಕ ಆಯುಕ್ತ ಎಸ್‌.ಎನ್‌. ಗಣಾಚಾರಿ, ಆರೋಗ್ಯ ನಿರೀಕ್ಷಕರಾದ ಪುಂಡಲೀಕಪ್ಪ ಯಾತನೂರ, ವಿನಾಯಕ ಕೋಳೂರ, ಸೈಯ್ಯದ್‌ ಸಿಂದಗಿ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next