ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪರಿಸ್ಥಿತಿ ಹೀನಾಯವಾಗಿದೆ. ಹೀಗಾಗಿ ಜೆಡಿಎಸ್ ಬೆಂಬಲ ಕೋರಿದೆ.
ಇದುವರೆಗೂ ಅಪ್ಪನನ್ನು ಅರ್ಥ ಮಾಡಿಕೊಂಡರೂ ಮಗನನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ನಿಲುವಿನ ಬಗ್ಗೆ ಕೆಪಿಸಿಸಿ ವಕ್ತಾರ, ಮಾಜಿ ಸಭಾಪತಿ ಬಿ.ಎಲ್. ಶಂಕರ್ ಅನುಮಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಕಾಂಗ್ರೆಸ್‌ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾ ಧಿಸಲಿದ್ದಾರೆ. ವ್ಯವಸ್ಥಿತ ಪ್ರಚಾರದಲ್ಲಿ ಬಿಜೆಪಿ ಮುಂದಿದ್ದರೂ ವಾಸ್ತವಿಕವಾಗಿ ಕಾಂಗ್ರೆಸ್ ಮುಂದಿದೆ.
ಇದನ್ನೂ ಓದಿ:BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ
ರಾಜ್ಯದಲ್ಲಿ ಬಿಜೆಪಿಗೆ ವಿರುದ್ಧ ಪರಿಸ್ಥಿತಿ ಇದೆ. ಈ ಚುನಾವಣೆ ಎರಡು ಪಕ್ಷಗಳ ನಡುವಿನ ಚುನಾವಣೆಯಲ್ಲ. ಬದುಕು ಮತ್ತು ಭಾವನಾತ್ಮಕ ವಿಚಾರಗಳ ನಡುವಿನ ಸಂಘರ್ಷ. ಹಳಿ ತಪ್ಪಿದ ರಾಜಕಾರಣ ಹಳಿಗೆ ತರುವ ಸಂಸದೀಯ ಪ್ರಜಾಪ್ರಭುತ್ವ ಬಲಪಡಿಸುವ ಕೆಲಸವಾಗಬೇಕಿದೆ ಎಂದರು.