Advertisement

ಧಾರವಾಡ : ಲಾರಿಗಳ ನಡುವೆ ಭೀಕರ ಅಪಘಾತ : ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

11:26 PM Jul 02, 2022 | Team Udayavani |

ಧಾರವಾಡ : ಎರಡು ಲಾರಿಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರೂ ಲಾರಿ ಚಾಲಕರು ಮೃತಪಟ್ಟ ಘಟನೆ ಹು-ಧಾ ಬೈಪಾಸ್ ನ ಇಟಿಗಟ್ಟಿ ಬಳಿ ಶನಿವಾರ ರಾತ್ರಿ ನಡೆದಿದೆ.

Advertisement

ಸಾವಿನ ಹೆದ್ದಾರಿ ಮತ್ತಿಬ್ಬರನ್ನು ಬಲಿ ಪಡೆದಿದ್ದು, ಮೂರು ದಿನಗಳ ಹಿಂದಷ್ಟೇ ಭೀಕರ ಅಪಾಘಾತವಾಗಿ ಇಬ್ಬರು ಸಾವನ್ನಪ್ಪಿದರು.

ಲಾರಿಗಳ ಮುಖಾಮುಖಿ ಢಿಕ್ಕಿಯಲ್ಲಿ, ಚಾಲಕರು ಸ್ಥಳದಲ್ಲಿಯೇ ಮೃತಪಟ್ಟರೆ, ಇಬ್ಬರಿಗೆ ಗಾಯಗಳಾಗಿವೆ.

ಇದಲ್ಲದೇ ಈ ಪೈಕಿ ಲಾರಿಯೊಂದಕ್ಕೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದಿದ್ದು, ಇದರಿಂದ ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ : ಸಿದ್ದಾಪುರ : ಗುತ್ತಿಗೆ ನೀಡುವುದಾಗಿ ಲಕ್ಷಾಂತರ ರೂಪಾಯಿ ವಂಚನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next