ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,230 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 118 ದಿನಗಳ ಕನಿಷ್ಠ ಪ್ರಮಾಣದ್ದಾಗಿದೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,45,75,473 ಕೋಟಿಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (ಸೆಪ್ಟೆಂಬರ್ 27) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪಿಎಫ್ಐ ಸಂಘಟನೆ ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದ : ಸಚಿವ ಸುನಿಲ್ ಕುಮಾರ್
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 42,358ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ದೇಶದಲ್ಲಿ 32 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,562ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.72ರಷ್ಟಿದೆ. ಒಂದೇ ದಿನದಲ್ಲಿ 1,057 ಕೋವಿಡ್ ಸಕ್ರಿಯ ಪ್ರಕರಣ ಇಳಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.18ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.1.58ರಷ್ಟಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ದೇಶಾದ್ಯಂತ ಕೋವಿಡ್ 19 ಲಸಿಕೆ ಅಭಿಯಾನದಡಿ ಈವರೆಗೆ 217.82 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ. 24 ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ ಪಶ್ಚಿಮಬಂಗಾಳದಲ್ಲಿ ಮೂರು ಮಂದಿ, ಮಹಾರಾಷ್ಟ್ರದಲ್ಲಿ ಇಬ್ಬರು ಸೇರಿದಂತೆ ಹತ್ತು ಮಂದಿ ಸಾವನ್ನಪ್ಪಿದ್ದಾರೆ.