Advertisement

ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು.

09:20 PM Mar 10, 2022 | Team Udayavani |

ಮೇಷ: ಆರೋಗ್ಯ ಸ್ಥಿರ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕೂಡಿದ ನಡೆ. ದೂರ ವ್ಯವಹಾರದಿಂದ ಧನ ವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

Advertisement

ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ.

ಮಿಥುನ: ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ಅಗತ್ಯ.

ಕಟಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಂಮೃದ್ಧಿ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಹಿರಿಯರಿಗೆ ಅನುಕೂಲಕರ ಪರಿಸ್ಥಿತಿ.

ಸಿಂಹ: ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ನೂತನ ಮಿತ್ರರ ಸಹಕಾರ. ಹಿರಿಯರ ಉತ್ತಮ ಮಾರ್ಗದರ್ಶನ.

Advertisement

ಕನ್ಯಾ: ಆರೋಗ್ಯ ಉತ್ತಮ. ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯàಜನೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೊಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರಮ. ಹಿರಿಯರ ಆರೋಗ್ಯ ಗಮನಿಸಿ.

ಮಕರ: ಆರೋಗ್ಯದಲ್ಲಿ ತಪಾಸಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ.

ಕುಂಭ: ದೀರ್ಘ‌ ಪ್ರಯಾಣದಲ್ಲಿ ನಿರೀಕ್ಷಿತ ಸಫ‌ಲತೆ. ಉತ್ತಮ ಸ್ಥಾನ ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಮಕ್ಕಳಿಂದ ಸಂತೋಷ ವೃದ್ಧಿ.

ಮೀನ: ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ನೂತನ ಮಿತ್ರರ ಭೇಟಿ.

Advertisement

Udayavani is now on Telegram. Click here to join our channel and stay updated with the latest news.

Next