Advertisement

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:13 AM Aug 04, 2022 | Team Udayavani |

ಮೇಷ
ದೈಹಿಕ ಸುಖ ಹಾಗೂ ಮಾನಸಿಕ ಸುಖಕ್ಕೆ ಹೆಚ್ಚಿದ ಪರಿಶ್ರಮ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ವಾಕ್‌ಚತುರತೆಯಿಂದ ಜನಮನ್ನಣೆ. ದಾಂಪತ್ಯ ಸುಖದಲ್ಲಿ ಪರಸ್ಪರ ಸಹಕಾರ.

Advertisement

ವೃಷಭ
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಸ್ಥಾನಮಾನ ಗೌರವ. ಅಧಿಕ ಧನಾರ್ಜನೆ. ಗೃಹದಲ್ಲಿ ಸಣ್ಣ ಬದಲಾವಣೆಗಳು ತೋರಿಬಂದಾವು. ಸಹೋದರಾದಿ ವರ್ಗದವರಿಂದ ನೆಮ್ಮದಿ ಸಂತೋಷ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಸುಖ.

ಮಿಥುನ
ಸುದೃಢ ಆರೋಗ್ಯ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಧಿಕಾರ ಗೌರವಾದಿ ಪ್ರಾಪ್ತಿ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸ.

ಕಟಕ
ಹಲವು ಚಟುವಟಿಕೆಗಳಿಂದ ಕೂಡಿದ ದಿನ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾದ ಆಲೋಚನೆ ನಿರ್ಣಯದಿಂದ ನಿರೀಕ್ಷಿತ ಸ್ಥಾನ ಲಾಭ. ಆಸ್ತಿ ವಿಚಾರದಲ್ಲಿ ತಾಳ್ಮೆ.

ಸಿಂಹ
ದೈಹಿಕ ಆರೋಗ್ಯ ವೃದ್ಧಿ ಹಾಗೂ ಮಾನಸಿಕ ಸಂತುಷ್ಟತೆ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಬಂಧುಗಳಿಂದ ಸಹಕಾರ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉದ್ಯೋಗ ವ್ಯವಹಾರದ‌ಲ್ಲಿ ಮಾತಿನಲ್ಲಿ ತಾಳ್ಮೆ ಎಚ್ಚರಿಕೆಯಿಂದ ಯಶಸ್ಸು. ದಾಂಪತ್ಯ ಸುಖ ವೃದ್ಧಿ. ಅಧ್ಯಯನಶೀಲರಿಗೆ ಲಾಭ.

Advertisement

ಕನ್ಯಾ
ಆರೋಗ್ಯವು ಸುದಾರಣೆಯ ಹಾದಿಯಲ್ಲಿ. ಸರಿಯಾದ ಶಿಸ್ತು ಪಾಲನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ಮಾನಸಿಕ ನೆಮ್ಮದಿ ವೃದ್ಧಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ನಿರ್ವಹಿಸುವ ಚಟುವಟಿಕೆಗಳಲ್ಲಿ ಪ್ರಗತಿ. ಮಿತ್ರರಿಂದ ಸಹಕಾರ.

ತುಲಾ
ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ, ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ
ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧು ಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನ ಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು
ಆರೋಗ್ಯ ವೃದ್ಧಿ. ಸತ್ಕರ್ಮ ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ.

ಮಕರ
ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ. ದಾಂಪತ್ಯ ಸುಖ ವೃದ್ಧಿ.

ಕುಂಭ
ನಯ ವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ. ಆರೋಗ್ಯದ ಬಗ್ಗೆ ಗಮನಿಸಿ.

ಮೀನ
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿ ಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ. ದಾಂಪತ್ಯ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಅಧಿಕ ಧನಾರ್ಜನೆ. ಪ್ರಯಾಣ ಅವಕಾಶ ಸಂಭವ. ಸಾಂಸಾರಿಕ ಸುಖ ತೃಪ್ತಿದಾಯಕ.

Advertisement

Udayavani is now on Telegram. Click here to join our channel and stay updated with the latest news.

Next