Advertisement

Daily Horoscope;ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ

07:10 AM Apr 08, 2023 | Shreeram Nayak |

ಮೇಷ: ದೀರ್ಘ‌ ಪ್ರಯಾಣ. ನಷ್ಟದ್ರವ್ಯವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

Advertisement

ವೃಷಭ: ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ. ಗುರುಹಿರಿಯರ ಆಶೀರ್ವಾದ.

ಮಿಥುನ: ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಗುರುಹಿರಿಯರ ಪ್ರೋತ್ಸಾಹ, ಮಾರ್ಗದರ್ಶನ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾಗಿ ಧನವ್ಯಯ.

ಕರ್ಕ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ದಂಪತಿಗಳಿಗೆ ಪರಸ್ಪರ ಪ್ರೋತ್ಸಾಹ ಅಗತ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟತೆ ಇರಲಿ. ಆಸ್ತಿ ಕ್ರಯ ವಿಕ್ರಯ ವಿಚಾರದಲ್ಲಿ ಮುನ್ನಡೆ.

ಸಿಂಹ: ಆರೋಗ್ಯ ಗಮನಿಸಿ. ಹಠಮಾರಿ ತನದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ಮಧ್ಯಮ.

Advertisement

ಕನ್ಯಾ: ಉತ್ತಮ ವಾಕ್‌ಚತುರತೆ ಪ್ರದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ದಂಪತಿಗಳಿಗೆ ಪರಸ್ಪರರಿಂದ ಲಾಭ.

ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ಧೈರ್ಯ ಉತ್ಸಾಹ ದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಗೌರವ.

ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪ ಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ದಾಂಪತ್ಯ ಸುಖ ತೃಪ್ತಿ. ವಿದ್ಯಾರ್ಥಿಗಳಿಗೆ ಶ್ರಮದಿಂದ ಶ್ರೇಯ.

ಮೀನ: ದೀರ್ಘ‌ ಪ್ರಯಾಣ ದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ದಾಂಪತ್ಯ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನಮಾನ.

Advertisement

Udayavani is now on Telegram. Click here to join our channel and stay updated with the latest news.

Next