ಕೊರಟಗೆರೆ : ಪ್ರತಿಯೊಂದು ಗ್ರಾಮವೂ ಆರ್ಥಿಕವಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಇದಕ್ಕೆ ಹೈನುಗಾರಿಕೆ ಸಹಕಾರಿಯಾಗಿದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ಹೇಳಿದರು.
ತಾಲೂಕಿನ ಕೋಳಾಲ ಹೋಬಳಿಯ ವಡೇರಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 5 ಲಕ್ಷ ರೂ ಮೌಲ್ಯದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಹೈನುಗಾರಿಕೆ ಹೆಚ್ಚು ಲಾಭದಾಯಕವಾಗಿದ್ದು ಈಗ ಮಹಿಳೆಯರು ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದು ಪ್ರತಿಯೊಂದು ಕುಟುಂಬವೂ ಈಗ ಹೈನುಗಾರಿಕೆಯಿಂದ ಬದುಕನ್ನು ಕಟ್ಟುಕೊಂಡಿದೆ ಎಂದು ಹೇಳಿದರು.
ತುಮಕೂರು ಹಾಲು ಒಕ್ಕೂಟದ ತಾಲೂಕು ನಿದೇರ್ಶಕ ಗುಂಡಿನಪಾಳ್ಯ ಈಶ್ವರಯ್ಯ ಮಾತನಾಡಿ ಒಕ್ಕೂಟವು ರೈತರ ಅನುಕೂಲಕ್ಕಾಗಿ ಹಲವು ಯೋಜನೆ ಮತ್ತು ಸಹಕಾರಗಳನ್ನು ನೀಡುತ್ತಿದ್ದು ಇದನ್ನು ಬಳಸಿಕೊಂಡು ರೈತರು ಉತ್ತಮ ಗುಣಮಟ್ಟದ ಹಾಲನ್ನು ನೀಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತುಮಕೂರು ಹಾಲು ಒಕ್ಕೂಟದ ತಾಲೂಕು ವಿಸ್ತರಣಾಧಿಕಾರಿಗಳಾದ ರಂಜಿತ್, ವನಜಾಕ್ಷಿ, ವಡೇರಹಳ್ಳಿ ಹಾಲು ಉತ್ಪಾಧಕರ ಸಹಕಾರ ಸಂಘದ ಅಧ್ಕಕ್ಷೆ ನಳೀನಾ, ಉಪಾಧ್ಯಕ್ಷೆ ಲಕ್ಷ್ಮಮ್ಮ, ಕಾರ್ಯದರ್ಶಿ ಪಿ.ಸಿ ರತ್ನಮ್ಮ, ಕೃತಕ ಗರ್ಭಧಾರಣಾ ಕಾರ್ಯಕರ್ತ ವಿ.ಎನ್ ಅನಂತರಾಜು, ಮುಖಂಡರಾದ ಗಂಗಾಧರ್, ಶಿಕ್ಷಕ ರಾಜಣ್ಣ ಸೇರಿದಂತೆ ಗ್ರಾಮಸ್ಥರು ಇದ್ದರು.